ಬೆಂಗಳೂರು : ನಗರದ ಸಂಚಾರ ದಟ್ಟಣೆಗೆ ಮುಕ್ತಿ ಹಾಡುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಸ್ಥಾಪನೆಯಾಗಿದೆ.
ಮೈಸೂರು ರಸ್ತೆಯಿಂದ ಮಾಗಡಿ ರಸ್ತೆಗೆ ನೇರ ಸಂಪರ್ಕ ಕಲ್ಪಿಸುವ, ಸಾರ್ವಜನಿಕರು ಹಾಗೂ ವಾಹನ ಸವಾರರು ಬಹುಕಾಲದಿಂದ ಕಾಯುತ್ತಿದ್ದ ಬಿಡಿಎಯ ಮಹತ್ವಾಕಾಂಕ್ಷಿ 'ಎಸ್‌ಎಂ ಕೃಷ್ಣ ರಸ್ತೆ' ಶನಿವಾರ ಅಧಿಕೃತವಾಗಿ ಲೋಕಾರ್ಪಣೆಗೊಳ್ಳುತ್ತಿದೆ.
631 ಕೋಟಿ ರೂಪಾಯಿಗಳ ಬೃಹತ್ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಅದ್ಭುತ ರಸ್ತೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಲಿದ್ದಾರೆ.
ವಿಶೇಷತೆಗಳು ಮತ್ತು ರಸ್ತೆಯ ವ್ಯಾಪ್ತಿ
ಬೆಂಗಳೂರಿನ ಮೈಸೂರು ರಸ್ತೆಯ ಚಲ್ಲಘಟ್ಟ ಮೆಟ್ರೋ ನಿಲ್ದಾಣದಿಂದ ಆರಂಭವಾಗುವ ಈ ರಸ್ತೆಯು ಮಾಗಡಿ ರಸ್ತೆಯ ಕಡಬಗೆರೆ ಕ್ರಾಸ್‌ಗೆ ನೇರ ಸಂಪರ್ಕವನ್ನು ಕಲ್ಪಿಸುತ್ತದೆ.
ಒಟ್ಟು 10.7 ಕಿಲೋಮೀಟರ್ ಉದ್ದದ ಈ ಹೆದ್ದಾರಿಯು ಬರೋಬ್ಬರಿ 100 ಮೀಟರ್ (330 ಅಡಿ) ಅಗಲವನ್ನು ಹೊಂದಿದೆ. ಒಟ್ಟು 10 ಲೇನ್‌ಗಳ (ದಶಪಥ) ಈ ರಸ್ತೆಯು ನಾಡಪ್ರಭು ಕೆಂಪೇಗೌಡ ಬಡಾವಣೆಯ ಎಲ್ಲಾ 9 ಬ್ಲಾಕ್‌ಗಳ ಸಂಚಾರ ವ್ಯವಸ್ಥೆಯನ್ನು ಒಂದಕ್ಕೊಂದು ಬೆಸೆಯುವ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸಲಿದೆ


