Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರ ಮುಖಕ್ಕೆ  ಸಿಗರೇಟು ಸೇದಿದ  ಹೊಗೆ ಬಿಟ್ಟು ದುಷ್ಕ್ರತ್ಯ

Advertisement
ಗಂಗಾವತಿವಾಯು ವಿಹಾರಕ್ಕೆ ಎಂದು ಬಂದಿದ್ದ ಯುವತಿಯರು, ಮಹಿಳೆಯರ ಮುಖಕ್ಕೆ ಕೆಲ ಕಿಡಿಗೇಡಿಗಳು ಸಿಗರೇಟು ಸೇದಿದ ಬಳಿಕ ಹೊಗೆ ಬಿಟ್ಟು ದುಷ್ಟತನ ಮೆರೆದ ಘಟನೆ ಗಂಗಾವತಿಯ ಎಂಎನ್ಎಂ ಶಾಲೆಯ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ವಾಯು ವಿಹಾರದಲ್ಲಿ ತೊಡಗಿದ್ದ ಮಹಿಳೆಯರು, ಪುರುಷರು ಗುಂಪಾಗಿ ಕಿಡಿಗೇಡಿ ಯುವಕರನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕೂಡಿ ಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ಯುವಕರು ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕಕಾರಿ ವಾತಾವರಣ ನಿರ್ಮಾಣವಾಗಿತ್ತು.

ಕುವೆಂಪು ಬಡಾವಣೆ ಮತ್ತು ಜಯನಗರದ ಮಧ್ಯೆ ಇರುವ ಮಳೆಮಲ್ಲೇಶ್ವರ - ಗಾಯತ್ರಿ ದೇವಸ್ಥಾನಕ್ಕೆ ಹೋಗುವ ಮಾರ್ಗ ಮಧ್ಯದ ಜನ ವಸತಿ ಪ್ರದೇಶದಲ್ಲಿ ನೂತನ ವಸತಿ ಲೇಔಟ್ ನಿರ್ಮಾಣವಾಗಿದೆ. ಸಂಜೆ ಮತ್ತು ಬೆಳಗ್ಗೆ ವಾಯು ವಿಹಾರಕ್ಕೆ ಹೋಗುವ ಜನರಿಗೆ ಈ ಲೇಔಟ್​ನ ರಸ್ತೆಗಳು ಹೇಳಿ ಮಾಡಿಸಿದಂತಿದೆ. ಹೀಗಾಗಿ ಎಂದಿನಂತೆ ಶುಕ್ರವಾರ ರಾತ್ರಿ 9 ಗಂಟೆಯ ನಂತರ ಮಹಿಳೆಯರು ವಾಯು ವಿಹಾರದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ರಸ್ತೆಯ ಬದಿಯಲ್ಲಿ ಕುಳಿತಿದ್ದ ಯುವಕರು ಸಿಗರೇಟು ಸೇದಿ, ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಮಹಿಳೆಯರ ಮುಖಕ್ಕೆ ಸಿಗರೇಟಿನ ಹೊಗೆ ಬಿಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಶಶಿಧರ ಸ್ವಾಮಿ ಮುದೇನೂರು ಮಠ ತಿಳಿಸಿದ್ದಾರೆ.

ಈ ಬಗ್ಗೆ ಮಹಿಳೆಯರು ಪ್ರಶ್ನಿಸಿದ್ದಕ್ಕೆ "ನಮ್ಮ ಹಣದಲ್ಲಿ ನಾವು ಸೇದುತ್ತೇವೆ. ನೀವ್ಯಾರು ಕೇಳಲು. ಮುಖಕ್ಕೆ ಹೊಗೆ ಬರಬಾರದು ಎಂದರೆ ಈ ರಸ್ತೆಯಲ್ಲಿ ಓಡಾಡಬಾರದು" ಎಂದು ಯುವಕರು ತಾಕೀತು ಮಾಡಿದ್ದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ತಿಳಿದು ಬಂದಿದೆ.

ಇದರಿಂದ ಕೋಪಗೊಂಡ ಮಹಿಳೆಯರು, ಯುವಕರನ್ನು ತರಾಟೆಗೆ ತೆಗೆದುಕೊಳ್ಳುತಿದ್ದಂತೆಯೇ ಜನ ಜಮಾಯಿಸಿ ಯುವಕರನ್ನು ಹಿಡಿಯಲು ಯತ್ನಿಸಿದ್ದಾರೆ. ಈ ಪೈಕಿ ಇಬ್ಬರು ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ ಬಳಿಕ 112 ವಾಹನ ಸ್ಥಳಕ್ಕೆ ಬಂದು ಯುವಕರನ್ನು ಕರೆದೊಯ್ದಿದೆ.

ದೂರು ಸಲ್ಲಿಕೆಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶನಿವಾರ ಜಯನಗರ, ಕುವೆಂಪು ಬಡಾವಣೆ, ಸತ್ಯನಾರಾಯಣ ಪೇಟೆಯ ಸುಮಾರು 150ಕ್ಕೂ ಹೆಚ್ಚು ಜನ ಆಗಮಿಸಿ ನಗರ ಠಾಣೆಯ ಪೊಲೀಸರಿಗೆ ದೂರು ನೀಡಿದರು.

ದೂರು ಸ್ವೀಕರಿಸಿದ ಬಳಿಕ ಪ್ರತಿಕ್ರಿಯೆ ನೀಡಿದ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್, "ಖಾಸಗಿ ಲೇಔಟ್​ಗಳಲ್ಲಿ ಸಿಸಿ ಕ್ಯಾಮರಾ ಹಾಕಿಸುವಂತೆ ನಗರಸಭೆಗೆ ಸೂಚನೆ ನೀಡಲಾಗುವುದು. ಹೆಚ್ಚಿನ ಭದ್ರತೆ ನೀಡಲು ಪೊಲೀಸ್ ಗಸ್ತು ನಿಯೋಜಿಸಲಾಗುವುದು" ಎಂದು ಭರವಸೆ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ