LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹಾವು ಕಡಿತ ಪ್ರಕರಣ : ರಾಜ್ಯದಲ್ಲಿ 10 ತಿಂಗಳಲ್ಲಿ 191 ಮಂದಿ ಸಾವು

Advertisement

ಬೆಂಗಳೂರು: ಕರ್ನಾಟಕದಲ್ಲಿ ಹಾವು ಕಡಿತ ಪ್ರಕರಣಗಳು ಆತಂಕ ಮೂಡಿಸಿದ್ದು, ಕಳೆದ 10 ತಿಂಗಳಲ್ಲಿ 16,229 ಮಂದಿ ಹಾವು ಕಡಿತಕ್ಕೆ ಒಳಗಾಗಿದ್ದಾರೆ. ಈ ಪೈಕಿ 191 ಮಂದಿ ಮೃತಪಟ್ಟಿದ್ದಾರೆ. ಮುಂದಿನ ಮೂರು ತಿಂಗಳಲ್ಲಿ ಸಾವಿನ ಸಂಖ್ಯೆ 220ರ ಗಡಿ ದಾಟುವ ಆತಂಕ ಎದುರಾಗಿದೆ.

ದೇಶದಲ್ಲಿ ಹಾವು ಕಡಿತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು 49,965 ಮಂದಿ ಹಾವು ಕಡಿತಕ್ಕೆ ಒಳಗಾಗಿದ್ದು, ಈ ಪೈಕಿ 446 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ವಿಶೇಷವಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಜನರು ಹಾವು ಕಡಿತಕ್ಕೆ ಹೆಚ್ಚು ತುತ್ತಾಗುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದಿರುವುದು ಸಾವಿನ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ.

ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಹಾವು ಕಡಿತಕ್ಕೆ ಒಳಗಾದವರಿಗೆ ತಕ್ಷಣ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಂಡಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಹಾವು ಕಡಿತದ ವಿಷನಿರೋಧಕ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.

ಇದರ ಜೊತೆಗೆ, ಹಾವು ಕಡಿತದಿಂದ ಸಂಭವಿಸುವ ಮರಣ ಪ್ರಕರಣಗಳ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡೆತ್ ಆಡಿಟ್ ನಡೆಸಲಾಗುತ್ತಿದೆ. ಈ ಮೂಲಕ ಸಾವಿಗೆ ಕಾರಣಗಳು ಹಾಗೂ ಚಿಕಿತ್ಸೆಯಲ್ಲಿ ಉಂಟಾಗುವ ವಿಳಂಬದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ