LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸೋಷಿಯಲ್ ಮೀಡಿಯಾ ಮನಬಂದಂತೆ ಪೋಸ್ಟ್ ಮಾಡುವಂತಿಲ್ಲ: ಹೈಕೋರ್ಟ್ ಎಚ್ಚರಿಕೆ

Advertisement

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿದ್ದೇವೆ ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೊಬ್ಬರು ತಮಗೆ ಇಷ್ಟ ಬಂದ ಯಾವುದೇ ರೀತಿಯ ಸಂದೇಶಗಳನ್ನು ಪೋಸ್ಟ್ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court) ಸ್ಪಷ್ಟಪಡಿಸಿದೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಮಾನಹಾನಿ ಮತ್ತು ಬೆದರಿಕೆ ಒಡ್ಡಿದ ಆರೋಪಕ್ಕೆ ಸಂಬಂಧಿಸಿದ ಎಫ್‌ಐಆರ್ (FIR) ರದ್ದುಪಡಿಸಲು ನಿರಾಕರಿಸಿದ ನ್ಯಾಯಾಲಯ, ಈ ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆ ಹಾಕುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪ ಎದುರಿಸುತ್ತಿರುವ ಶುಭಾ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವ ಸಂದರ್ಭದಲ್ಲಿ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಈ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. 

ಸಾಮಾಜಿಕ ಜಾಲತಾಣದ ಖಾತೆ ಇರುವ ಮಾತ್ರಕ್ಕೆ ತಮಗೆ ಬೇಕಾದ ಯಾವುದೇ ವಿಷಯವನ್ನು ಪ್ರಕಟಿಸಲು ಮುಕ್ತ ಪರವಾನಗಿ ಸಿಕ್ಕಂತಲ್ಲ. ಪೋಸ್ಟ್ ಮಾಡುವ ಪ್ರತಿಯೊಂದು ಸಂದೇಶವೂ ಭಾರತೀಯ ಸಂವಿಧಾನದ 19(1)(ಎ) ವಿಧಿಯಡಿ ಕಲ್ಪಿಸಲಾಗಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿ ಹಾಗೂ ಮಿತಿಯೊಳಗೇ ಇರಬೇಕು ಎಂದು ನ್ಯಾಯಪೀಠ ತಿಳಿಸಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST