ಬೆಂಗಳೂರು : ನೆಲಗದರನಹಳ್ಳಿಯ ಸುವರ್ಣನಗರದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಸಮಾಜ ಸೇವಕರಾದ ಡಾ. ಕಾಳೇಗೌಡ್ರು ಸುವರ್ಣ ಕರ್ನಾಟಕ ಕಾರ್ಮಿಕರ ಸಮಿತಿಯ ಮಹಿಳಾ ಪದಾಧಿಕಾರಿಗಳಿಗೆ ಉಡುಗೊರೆಗಳನ್ನು ವಿತರಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕಾಳೇಗೌಡ್ರು , "ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕುಟುಂಬದಿಂದ ಹಿಡಿದು ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮ ಪ್ರತಿಭೆ, ಪರಿಶ್ರಮ ಮತ್ತು ತ್ಯಾಗದ ಮನೋಭಾವನೆ ಮೂಲಕ ಉತ್ತಮ ಕೊಡುಗೆ ನೀಡುತ್ತಿದ್ದಾರೆ. ಮಹಿಳೆಯರ ಸಬಲೀಕರಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಹಿಳೆಯರಿಗೆ ಗೌರವ ಮತ್ತು ಸಮಾನ ಅವಕಾಶ ದೊರೆಯುವ ಸಮಾಜ ನಿರ್ಮಾಣವೇ ನಮ್ಮೆಲ್ಲರ ಗುರಿಯಾಗಬೇಕು," ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸುವರ್ಣ ಕರ್ನಾಟಕ ಕಾರ್ಮಿಕರ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಡಿ.ಎಲ್. ಚನ್ನಕೇಶವ್ ಮಾತನಾಡಿ, "ಮಹಿಳೆಯರ ಅಭಿವೃದ್ಧಿಯೇ ದೇಶದ ಅಭಿವೃದ್ಧಿಗೆ ಮೂಲಾಧಾರವಾಗಿದೆ. ಮಹಿಳೆಯರಿಗೆ ಆತ್ಮವಿಶ್ವಾಸ, ಉದ್ಯೋಗಾವಕಾಶ ಹಾಗೂ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸಂಘಟನೆ ಸದಾ ಕಾರ್ಯನಿರ್ವಹಿಸುತ್ತಿದೆ. ಮಹಿಳೆಯರ ಸೇವೆ ಮತ್ತು ಸಾಧನೆಯನ್ನು ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ," ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸುವರ್ಣ ಕರ್ನಾಟಕ ಕಾರ್ಮಿಕರ ಸಮಿತಿಯ ಮಹಿಳಾ ರಾಜ್ಯಾಧ್ಯಕ್ಷೆ ಗಾಯತ್ರಿ ಸೇರಿದಂತೆ ಸವಿತಾ, ಪಾರ್ವತಿ, ರಾಣಿ, ಜ್ಯೋತಿ, ಲತಾ ಹಾಗೂ ರಕ್ಷಿತಾ ಉಪಸ್ಥಿತರಿದ್ದು, ಮಹಿಳಾ ದಿನಾಚರಣೆಯ ಅಂಗವಾಗಿ ಉಡುಗೊರೆಗಳನ್ನು ಸ್ವೀಕರಿಸಿದರು. ಕಾರ್ಯಕ್ರಮವು ಮಹಿಳಾ ಸಬಲೀಕರಣ ಮತ್ತು ಸಮಾಜದಲ್ಲಿ ಮಹಿಳೆಯರ ಸ್ಥಾನಮಾನವನ್ನು ಮತ್ತಷ್ಟು ಬಲಪಡಿಸುವ ಸಂದೇಶದೊಂದಿಗೆ ಯಶಸ್ವಿಯಾಗಿ ನಡೆಯಿತು.
ಈ ಸಂದರ್ಭದಲ್ಲಿ ಕೆಂಪೇಗೌಡ, ಪಾಪಯ್ಯ, ಸುನೀಲ್, ಮೋಹನ್ ರಾಜು, ನವೀನ್, ವೆಂಕಟೇಶ್, ಒಮೇಶ್, ಸಿದ್ದಗಂಗಾ, ವಿಜಿ, ಮುನಿರಾಜು, ಕುಮಾರ್, ಶ್ರೀನಿವಾಸ್, ರವಿ, ರಮೇಶಣ್ಣ ಸೇರಿದಂತೆ ಹಲವಾರು ಮುಖಂಡರು, ಹಿತೈಷಿಗಳು ಉಪಸ್ಥಿತರಿದ್ದರು.
ವರದಿ: ಅಯ್ಯಣ್ಣ ಮಾಸ್ಟರ್


