Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಯಿ ಬುದ್ಧಿಮಾತು ಹೇಳಿದ್ದಕ್ಕೆ ವಿಷ ಸೇವಿಸಿ ಮಗ ಆತ್ಮಹತ್ಯೆ 

Advertisement
ಬೆಳಗಾವಿ: 'ಹೊಸ ವರ್ಷ ಬಂದಿದೆ, ಇನ್ಮುಂದೆಯಾದರೂ ಸರಿಯಾಗಿ ಕೆಲಸ ಮಾಡು' ಎಂದು ತಾಯಿ ಹೇಳಿದ ಬುದ್ಧಿಮಾತನ್ನೇ ಅವಮಾನವಾಗಿ ಭಾವಿಸಿದ ಯುವಕನೊಬ್ಬ ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಿತ್ತೂರು ತಾಲೂಕಿನ ಉಗರಖೋಡ ಗ್ರಾಮದಲ್ಲಿ ನಡೆದಿದೆ.

ಉಗರಖೋಡ ಗ್ರಾಮದ ನಿವಾಸಿ ಕಲ್ಮೇಶ ಕಾಜಗಾರ (24) ಮೃತಪಟ್ಟ ದುರ್ದೈವಿ. ಡಿಸೆಂಬರ್ 31ರ ರಾತ್ರಿ ಇಡೀ ಜಗತ್ತು ಹೊಸ ವರ್ಷದ ಸಂಭ್ರಮದಲ್ಲಿರುವಾಗ, ಇತ್ತ ಕಲ್ಮೇಶನ ತಾಯಿ ಮಂಜುಳಾ ಅವರು ಮಗನ ಭವಿಷ್ಯದ ಬಗ್ಗೆ ಕಾಳಜಿಯಿಂದ ಮಾತನಾಡಿದ್ದರು.

'ಹೊಸ ವರ್ಷದಿಂದಲಾದರೂ ಚೆನ್ನಾಗಿ ಕೆಲಸ ಮಾಡಿಕೊಂಡು ಬಾಳಪ್ಪಾ' ಎಂದು ಕಿವಿಮಾತು ಹೇಳಿದ್ದರು. ಆದರೆ, ಈ ಮಾತಿನಿಂದ ತೀವ್ರವಾಗಿ ಮನನೊಂದ ಕಲ್ಮೇಶ, ತಕ್ಷಣವೇ ಮನೆಯಿಂದ ಹೊರಬಂದಿದ್ದಾನೆ.

ಗ್ರಾಮದ ಸರ್ಕಾರಿ ಶಾಲೆಯ ಆವರಣಕ್ಕೆ ತೆರಳಿದ ಕಲ್ಮೇಶ, ಅಲ್ಲಿ ಕೀಟನಾಶಕ ಸೇವಿಸಿದ್ದಾನೆ. ವಿಷಯ ತಿಳಿದ ತಕ್ಷಣ ಕುಟುಂಬಸ್ಥರು ಆತನನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೆ ನಿನ್ನೆ ರಾತ್ರಿ ಕಲ್ಮೇಶ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ