Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ತಿ ವಿಚಾರಕ್ಕೆ ಮಗನ ಕೊಲೆ : ತಂದೆ ಹಾಗೂ ಇಬ್ಬರು ಸಂಬಂಧಿಕರಿಗೆ ಜೀವಾವಧಿ ಶಿಕ್ಷೆ 

Advertisement
ಉತ್ತರಕನ್ನಡ : ಆಸ್ತಿ ವಿಚಾರಕ್ಕೆ ಮಗನನ್ನೇ ಕೊಲೆ ಮಾಡಿದ ತಂದೆ ಹಾಗೂ ಇಬ್ಬರು ಸಂಬಂಧಿಕರು ಸೇರಿದಂತೆ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಶಿರಸಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶುಕ್ರವಾರ ಮಹತ್ವದ ತೀರ್ಪು ನೀಡಿದೆ.ಹಳಿಯಾಳ ಪೊಲೀಸ್ ಠಾಣ ವ್ಯಾಪ್ತಿಯ ಬಿಡೊಳ್ಳಿ ಗ್ರಾಮದಲ್ಲಿ ಕೇಶವ ಎಂಬ ಯುವಕನ ಕೊಲೆ ನಡೆದಿತ್ತು.

ಈ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿದೆ. ಅಕ್ಷಯ್ ಅಲಿಯಾಸ್ ಆಕಾಶ್ ಕಿತ್ತೂರಕರ್, ಪಾಂಡುರಂಗ ಕಿತ್ತೂರಕರ್ ಹಾಗೂ ಲತಾ ಅಲಿಯಾಸ್ ತುಳಸಾಯಿ ಕಿತ್ತೂರಕರ್ ಎಂಬುವವರೇ ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಇವರಿಗೆ ಜೀವಾವಧಿ ಶಿಕ್ಷೆ ಸಹಿತ ತಲಾ 25 ರೂ.ಗಳ ದಂಡ ವಿಧಿಸಿ ನ್ಯಾಯಾಧೀಶರಾದ ಕಿರಣ ಕಿಣಿ ಅವರು ಆದೇಶ ಹೊರಡಿಸಿದ್ದಾರೆ.

ಪಾಂಡುರಂಗ ಕಿತ್ತೂರಕರ್​​ನ ಮೊದಲ ಹೆಂಡತಿಯ ಮಗನಾದ ಕೇಶವ ತನಗೆ ಬರಬೇಕಾದ ಆಸ್ತಿಯ ಪಾಲನ್ನು ಕೇಳಿದ್ದೇ ಆತನ ಪ್ರಾಣಕ್ಕೆ ಸಂಚಕಾರವಾಗಿತ್ತು. ಮಗನಿಗೆ ಆಸ್ತಿ ನೀಡುವುದನ್ನು ತಪ್ಪಿಸುವ ಉದ್ದೇಶದಿಂದ ಆರೋಪಿಗಳು ಸಂಚು ರೂಪಿಸಿ, ಪ್ಲಾಸ್ಟಿಕ್ ಹಗ್ಗದಿಂದ ಆತನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರು. ಬಳಿಕ ಆತನನ್ನು ಕಂಬಕ್ಕೆ ಕಟ್ಟಿ ಹಾಕಿ ಕ್ರೂರವಾಗಿ ಕೊಲೆ ಮಾಡಿ, ಸಾಕ್ಷ್ಯಗಳನ್ನು ನಾಶಪಡಿಸಲು ಪ್ರಯತ್ನಿಸಿದ್ದರು.

ಈ ಗಂಭೀರ ಪ್ರಕರಣದ ಕುರಿತು ಹಳಿಯಾಳ ಪೊಲೀಸ್ ಠಾಣೆಯ ಅಂದಿನ ತನಿಖಾಧಿಕಾರಿ ಹಾಗೂ ಉಪನಿರೀಕ್ಷಕ ಬಿ.ಎಸ್. ಲೋಕಾಪುರ ಅವರು ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆಯ ಸಂದರ್ಭದಲ್ಲಿ ಹಳಿಯಾಳ ಠಾಣೆ ಪೊಲೀಸ್ ಕಾನ್ಸ್​ಟೇಬಲ್ ಹನುಮಂತ ಬಗಿ ಅವರು ಸಾಕ್ಷಿದಾರರನ್ನು ಕಾಲಕಾಲಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೂಲಕ ಕಾನೂನು ಪ್ರಕ್ರಿಯೆಗೆ ಸಹಕರಿಸಿದ್ದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ