Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶಿ - ವಿದೇಶಿ ಪ್ರವಾಸಿಗರ ಸುರಕ್ಷತೆಗೆ ವಿಶೇಷ ಪ್ರತ್ಯೇಕ ಪೊಲೀಸ್ ಉಪ ವಿಭಾಗ ತೆರೆಯಲು ಒತ್ತಾಯ

Advertisement
ಬೆಂಗಳೂರುದೇಶಿ - ವಿದೇಶಿ ಪ್ರವಾಸಿಗರ ಸುರಕ್ಷತೆ, ಭದ್ರತೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಂಪಿಯಲ್ಲಿ ವಿಶೇಷ ಪ್ರತ್ಯೇಕ ಪೊಲೀಸ್ ಉಪ ವಿಭಾಗ (ಡಿವೈಎಸ್ಪಿ) ಕಚೇರಿ ಆರಂಭಿಸುವಂತೆ ಶಾಸಕ ಜಿ.ಜನಾರ್ದನ ರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕ ಜನಾರ್ದನ ರೆಡ್ಡಿ, ಹಂಪಿಯಲ್ಲಿ ಪೊಲೀಸ್ ಉಪ ವಿಭಾಗ ಕಚೇರಿ ಸ್ಥಾಪನೆ ಹಾಗೂ ಆನೆಗೊಂದಿಯಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರತ್ಯೇಕ ಪೊಲೀಸ್ ಠಾಣೆ ಸ್ಥಾಪನೆಯ ಅಗತ್ಯ, ಮಹತ್ದದ ಬಗ್ಗೆ ಶಾಸಕ ರೆಡ್ಡಿ, ಸಿಎಂಗೆ ವಿವರಿಸಿದರು.

ವರ್ಷಕ್ಕೆ 40 ಲಕ್ಷ ಪ್ರವಾಸಿಗರುಹಂಪಿ ಹಾಗೂ ಆನೆಗೊಂದಿಯ ವಿಶ್ವವಿಖ್ಯಾತ ಮತ್ತು ಐತಿಹಾಸಿಕ ತಾಣಗಳಾಗಿವೆ. ಈ ತಾಣಗಳ ವೀಕ್ಷಣೆಗೆಂದು ಪ್ರತಿವರ್ಷ ದೇಶಾದ್ಯಂತದ ಸುಮಾರು 40 ಲಕ್ಷ ಪ್ರಮಾಣದಷ್ಟು ದೇಶಿ - ವಿದೇಶಿ ಪ್ರವಾಸಿಗರು ಬರುತ್ತಾರೆ. ಈ ಪೈಕಿ ವರ್ಷಕ್ಕೆ ಮೂರು ಲಕ್ಷ ವಿದೇಶಿ ಪ್ರವಾಸಿಗರು ಬರುತ್ತಾರೆ. ಈ ಪ್ರವಾಸಿಗರ ರಕ್ಷಣೆ, ಭದ್ರತೆ ದೃಷ್ಟಿಯಿಂದ ಪ್ರತ್ಯೇಕ ಪೊಲೀಸ್ ಠಾಣೆ ಅಗತ್ಯವಾಗಿದೆ. ಈ ಹಿಂದೆ ನಾನು ರಾಜ್ಯದ ಪ್ರವಾಸೋದ್ಯಮ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ಪ್ರವಾಸಿಗರ ರಕ್ಷಣೆ ದೃಷ್ಟಿಯಿಂದ ಹಂಪಿಯಲ್ಲಿ ಪ್ರತೇಕ ಪೊಲೀಸ್ ಉಪ ವಿಭಾಗ ಕಚೇರಿ ಸ್ಥಾಪಿಸಲಾಗಿತ್ತು. ವ್ಯಾಪ್ತಿಯಲ್ಲಿನ ಪ್ರವಾಸಿ ಸ್ಥಳಕ್ಕೆ ನಿತ್ಯ ಗಸ್ತು ತಿರುಗಲು ಪೊಲೀಸ್ ಸಿಬ್ಬಂದಿಗೆ ದ್ವಿಚಕ್ರವಾಹನಗಳ ವ್ಯವಸ್ಥೆಯೂ ಮಾಡಲಾಗಿತ್ತು. ಆದರೆ, ನಮ್ಮ ಸರ್ಕಾರದ ಬಳಿಕ ಅಧಿಕಾರಕ್ಕೆ ಬಂದ ಸರ್ಕಾರ ಈ ಪೊಲೀಸ್ ವಿಭಾಗ ಕಚೇರಿಯನ್ನು ಬೇರೆಡೆಗೆ ಸ್ಥಳಾಂತರಿಸಿತು. ಇದರಿಂದ ಹಂಪಿ - ಆನೆಗೊಂದಿ ಭಾಗದಲ್ಲಿ ಪ್ರವಾಸಿಗರ ಸುರಕ್ಷತೆಗೆ ಆತಂಕ ಎದುರಾಗಿದೆ ಎಂದು ರೆಡ್ಡಿ ವಿವರಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ