LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವ್ಯಕ್ತಿತ್ವ ಬೆಳವಣಿಗೆಗೆ, ಸಂವಹನ ಕೌಶಲ್ಯವೃದ್ದಿಗೆ ಆಶುಭಾಷಣ ಸಹಕಾರಿ

Advertisement
ತುರುವೇಕೆರೆ : ವಿದ್ಯಾರ್ಥಿಗಳಿಗೆ, ವೃತ್ತಿಪರರಿಗೆ ತಮ್ಮ ವ್ಯಕ್ತಿತ್ವವನ್ನು ಬೆಳೆಸಲು ಮತ್ತು ಸಂವಹನ ಕೌಶಲ್ಯಗಳನ್ನು ಸುಧಾರಿಸಲು ಆಶುಭಾಷಣ ಅತ್ಯುತ್ತಮ ಅವಕಾಶವಾಗಿದೆ ಎಂದು ಅಜ್ಜನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಕನ್ನಡ ಶಿಕ್ಷಕ ಶಿವಣ್ಣ ತಿಳಿಸಿದರು.

ತಾಲ್ಲೂಕಿನ ಕೊಡಗೀಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕಸಾಪ ನಡೆ ಶಾಲಾಕಾಲೇಜುಗಳ ಕಡೆ ಕಾರ್ಯಕ್ರಮದಲ್ಲಿ ಆಶುಭಾಷಣದ ಮಹತ್ವ ಕುರಿತಂತೆ ಮಾತನಾಡಿದ ಅವರು, ಆಶುಭಾಷಣ ಸ್ಪರ್ಧೆಗಳು ವ್ಯಕ್ತಿಯ ಮಾತನಾಡುವ ಕೌಶಲ್ಯ, ವಿಶ್ವಾಸ ಮತ್ತು ಜ್ಞಾನವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದರು.



ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಸಮನ್ವಯಾಧಿಕಾರಿ ಸುರೇಶ್ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರು ದಿವಾನರಾಗಿದ್ದ ಕಾಲದಲ್ಲಿ ಕನ್ನಡ ಭಾಷೆ ಹಾಗೂ ಸಾಹಿತ್ಯದ ಬೆಳವಣಿಗೆಗಾಗಿ ಕನ್ನಡ ಸಾಹಿತ್ಯ ಪರಿಷತ್ತನ್ನು ಆರಂಭಿಸಲಾಯಿತು. ಅಂದಿನಿಂದ ಇಂದಿನವರೆಗೆ ಪರಿಷತ್ತು ಕನ್ನಡ ನಾಡಿನಲ್ಲಿ ಕಥೆ, ಕವನ, ಸಾಹಿತ್ಯ ರಚಿಸುವ ಉದಯೋನ್ಮುಖ ಪ್ರತಿಭೆಗಳಿಗೆ ಸೂಕ್ತ ಅವಕಾಶಗಳನ್ನು ನೀಡಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡುತ್ತಿದೆ ಎಂದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಕಸಾಪ ಹೋಬಳಿ ಘಟಕದ ಅಧ್ಯಕ್ಷ ವಿಜಯ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಸಾಹಿತ್ಯದ ಅಭಿರುಚಿ, ಕನ್ನಡ ಭಾಷೆಯ ಬಗ್ಗೆ ಅಭಿಮಾನವನ್ನು ಬೆಳೆಸುವ ನಿಟ್ಟಿನಲ್ಲಿ ಶಾಲಾಕಾಲೇಜಿನಲ್ಲಿ ಸಾಹಿತ್ಯಿಕ ಕಾರ್ಯಕ್ರಮ ಆಯೋಜಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಕಸಾಪ ತಾಲೂಕು ಅಧ್ಯಕ್ಷ ಡಿ.ಪಿ.ರಾಜು ಮಾತನಾಡಿ, ಹಳ್ಳಿಗಾಡಿನ ಜನರು ತಮ್ಮ ಗ್ರಾಮದಲ್ಲಿರುವ ಸರ್ಕಾರಿ ಕನ್ನಡ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸಬೇಕು. ಉತ್ತಮ ಗುಣಮಟ್ಟದ ಹಾಗೂ ಉಚಿತ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯುತ್ತಿದೆ. ಆದರೆ ಗ್ರಾಮೀಣ ಪ್ರದೇಶದ ಜನರಲ್ಲಿ ಆಂಗ್ಲಭಾಷಾ ವ್ಯಾಮೋಹ ಹೆಚ್ಚಾಗಿ ಕನ್ನಡ ಶಾಲೆಗಳು ಮುಚ್ಚುತ್ತಿರುವುದು ನೋವಿನ ಸಂಗತಿಯಾಗಿದೆ ಎಂದು ವಿಷಾಧಿಸಿದರು.

ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಹಬೂಬ್ ಪಾಷ ಅಧ್ಯಕ್ಷತೆ ವಹಿಸಿದ್ದರು. ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಶಾಲೆಯ ವಿದ್ಯಾರ್ಥಿಗಳು ಜಾನಪದ ನೃತ್ಯ ಪ್ರದರ್ಶನ, ಸ್ವ ರಚಿತ ಕವನ ವಾಚಿಸುವ ಮೂಲಕ ರಂಜಿಸಿದರು. ತಾಲೂಕು ಕಸಾಪ ಗೌರವಾಧ್ಯಕ್ಷ ಟಿ.ಎಸ್.ಬೋರೇಗೌಡ, ಕಾರ್ಯದರ್ಶಿ ದಿನೇಶ್, ನಗರ ಘಟಕ ಕಾರ್ಯದರ್ಶಿ ಗಿರೀಶ್ ಕೆ ಭಟ್ ಸೇರಿದಂತೆ ಶಾಲೆಯ ಬೋಧಕ, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ