LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

 1,919 ಸರ್ಕಾರಿ ಶಾಲೆಗಳಲ್ಲಿ `ಸ್ಪೋಕನ್ ಇಂಗ್ಲಿಷ್ ತರಬೇತಿ

Advertisement

ಬೆಂಗಳೂರು : ರಾಜ್ಯದಲ್ಲಿ ಖಾಸಗಿ ಶಾಲೆಗಳ ಮಕ್ಕಳಿಗೆ ಸರಿಸಮಾನವಾಗಿ ಸರ್ಕಾರಿ ಶಾಲಾ ಮಕ್ಕಳೂ ಆತ್ಮವಿಶ್ವಾಸದಿಂದ ಇಂಗ್ಲಿಷ್ ಭಾಷೆಯಲ್ಲಿ ಮಾತನಾಡುವಂತೆ ಅನುಕೂಲವಾಗುವಂತೆ ಶಿಕ್ಷಣ ಇಲಾಖೆಯು ಮಹತ್ವದ ಕ್ರಮವೊಂದನ್ನು ಕೈಗೆತ್ತಿಕೊಂಡಿದೆ.

ರಾಜ್ಯದ 1,919 ಆಯ್ದ ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್) ಹಾಗೂ ಪಿಎಂ ಶ್ರೀ ಕೆಪಿಎಸ್ ಸಂಯೋಜಿತ ಘಟಕ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ 6 ತಿಂಗಳ ಅವಧಿಯ ವಿಶೇಷ 'ಸ್ಪೋಕನ್ ಇಂಗ್ಲಿಷ್' ತರಬೇತಿ ಕಾರ್ಯಕ್ರಮವನ್ನು ಜಾರಿಗೆ ತರಲು ನಿರ್ಧರಿಸಿದೆ.

ಈ ಯೋಜನೆಯು ಸೆಪ್ಟೆಂಬರ್ ತಿಂಗಳಿಂದ ಫೆಬ್ರವರಿವರೆಗೆ ನಡೆಯಲಿದ್ದು, ಒಟ್ಟು 19.67 ಕೋಟಿ ರೂಪಾಯಿ ಅನುದಾನವನ್ನು ನಿಗದಿಪಡಿಸಲಾಗಿದೆ. ಮಕ್ಕಳ ಗ್ರಹಿಕಾ ಮಟ್ಟಕ್ಕೆ ತಕ್ಕಂತೆ 1ರಿಂದ 3ನೇ ತರಗತಿ, 4ರಿಂದ 7ನೇ ತರಗತಿ ಹಾಗೂ 8ರಿಂದ 10ನೇ ತರಗತಿ ಎಂದು ಮೂರು ಹಂತಗಳಲ್ಲಿ ವಿಭಾಗಿಸಿ ತರಬೇತಿ ನೀಡಲಾಗುತ್ತದೆ.

ಶಾಲೆಯ ಆವರಣದ ಜತೆಗೆ ನಿತ್ಯ ಜೀವನದಲ್ಲೂ ಮಕ್ಕಳು ಸರಳ ವಾಕ್ಯಗಳನ್ನು ಬಳಸಿ ನಿರರ್ಗಳವಾಗಿ ಮಾತನಾಡಲು, ಸರಿಯಾದ ಉಚ್ಚಾರಣೆ ಹಾಗೂ ಶಬ್ದಕೋಶ ವೃದ್ಧಿಸಿಕೊಳ್ಳಲು ಈ ತರಬೇತಿ ಒತ್ತು ನೀಡಲಿದೆ.

ತರಬೇತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಮೂಲಕ 25ರಿಂದ 55 ವರ್ಷ ವಯೋಮಿತಿಯ ಇಂಗ್ಲಿಷ್ ಪದವೀಧರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅವರಿಗೆ ಮಾಸಿಕ 12 ಸಾವಿರ ರೂಪಾಯಿ ಗೌರವಧನ ನೀಡಲಾಗುತ್ತದೆ. ಮಕ್ಕಳ ಕಲಿಕಾ ಪ್ರಗತಿ ತಿಳಿಯಲು ನವೆಂಬರ್ ಹಾಗೂ ಮಾರ್ಚ್ ತಿಂಗಳಲ್ಲಿ ಎರಡು ಹಂತಗಳ ಮೌಲ್ಯಮಾಪನವನ್ನೂ ನಡೆಸಲಾಗುತ್ತದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್