Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜೃಂಭಣೆಯಿಂದ ಜರುಗಿದ ಶ್ರೀ ಬಸವೇಶ್ವರ ಸ್ವಾಮಿಯ ನೂತನ ರಥೋತ್ಸವ

Advertisement
ಮೊಳಕಾಲ್ಮುರು: ತಾಲೂಕಿನ ರಾಯಾಪುರದಲ್ಲಿ ಸೋಮವಾರ ಸಂಜೆ ಶ್ರೀ ಬಸವೇಶ್ವರ ಸ್ವಾಮಿಯ ನೂತನ ರಥೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.

ರಥೋತ್ಸವದ ಪ್ರಯುಕ್ತ ಬಸವೇಶ್ವರ ಸ್ವಾಮಿ ಹಾಗೂ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ರಥೋತ್ಸವಕ್ಕೂ ಮುಂಚಿತವಾಗಿ ನೂತನ ರಥಕ್ಕೆ ವಿವಿಧ ಬಣ್ಣದ ಬಾವುಟಗಳು ಮತ್ತು ಬೃಹತ್ ಹೂವಿನ ಹಾರಗಳಿಂದ ಅಲಂಕರಿಸಲಾಗಿತ್ತು.

ಬೆಳಿಗ್ಗೆ ರಥಕ್ಕೆ ನಾನಾ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ಅನುಸರಿಸುವ ಮೂಲಕ ಬಲಿ ಅನ್ನ ಅರ್ಪಿಸಿ ಮಧ್ಯಾಹ್ನದಂದು ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥವನ್ನು ಊರು ಬಾಗಿಲಿನಿಂದ ಮುಖ್ಯ ರಸ್ತೆಯ ಮೂಲಕ ಪಾಂಡು ರಂಗಸ್ವಾಮಿ ದೇವಸ್ಥಾನದವರೆಗೂ ಎಳೆದೊಯ್ದು ವಾಪಾಸು ಕರೆ ತರಲಾಯಿತು. ರಥೋತ್ಸವ ಎಳೆಯುತ್ತಿರುವಾಗ ರಥಕ್ಕೆ ನೆರೆದಿದ್ದ ಭಕ್ತರು ಬಾಳೆಹಣ್ಣು ಸೂರು ಬೆಲ್ಲ ಮಂಡಕ್ಕಿ ಎರಚಿ ತಮ್ಮ ಭಕ್ತಿಯನ್ನು ಸಮರ್ಪಿಸಿದರು.

ಭಾರೀ ಗಾತ್ರದ ಹೂವಿನ ಹಾರಗಳಿಂದ ರಥವನ್ನು ಅಲಂಕರಿಸಲಾಗಿತ್ತು. ಬಾಳೆಹಣ್ಣು ಮಂಡಕ್ಕಿ, ಸೂರುಬೆಲ್ಲವನ್ನು ಭಕ್ತರು ರಥಕ್ಕೆ ಎರಚಿ ಭಕ್ತಿ ಸಮರ್ಪಿಸುತ್ತಿದ್ದರು. ರಥೋತ್ಸವದಲ್ಲಿ ಕೋಲಾಟ, ನಂದಿಕೋಲು, ಡೊಳ್ಳು ಕುಣಿತ ಗಮನ ಸೆಳೆದವು. ರಥೋತ್ಸವದಲ್ಲಿ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಗ್ರಾಮದ ಮುಖಂಡರು ಭಾಗವಹಿಸಿದ್ದರು.

ವರದಿ: ಪಿ.ಎಂ ಗಂಗಾಧರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ