Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಮಹಾಯೋಗಿ ವೇಮನ ಜಯಂತ್ಯೋತ್ಸವ ಸಮಾರಂಭ

Advertisement
ಸಿರುಗುಪ್ಪ : ನಗರದ ತಾಲೂಕು ರೆಡ್ಡಿ ಸಮಾಜದ ಭವನದ ಸಭಾಂಗಣದಲ್ಲಿ ತಾಲೂಕಾಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ನಡೆದ ಶ್ರೀ ಮಹಾಯೋಗಿ ವೇಮನ ಜಯಂತ್ಯೋತ್ಸವ ಸಮಾರಂಭಕ್ಕೆ ಶಾಸಕ ಬಿ.ಎಮ್.ನಾಗರಾಜ ಅವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಚಾಲನೆ ನೀಡಿದರು.

ನಂತರ ಮಾತನಾಡಿ ವಿಲಾಸಿ ಜೀವನವನ್ನು ಅನುಭವಿಸುತ್ತಿದ್ದ ಶ್ರೀ ವೇಮನರು ಅವರ ಅತ್ತಿಗೆ ಮಲ್ಲಮ್ಮನವರಿಂದ ಜಾಗೃತಿಗೊಂಡು ಯೋಗಿಯಾಗಿ ಸಮಾಜದ ಸುಧಾರಣೆಗಾಗಿ ಶ್ರಮಿಸಿದರು.

ಅವರಂತೆ ಎಲ್ಲಾ ಮಹನೀಯರ ಕಾರ್ಯಗಳನ್ನು ಸಮಾಜಕ್ಕೆ ಜಾಗೃತಿ ಮೂಡಿಸುವಂತಹ ಸರ್ಕಾರದ ಮಹತ್ತರ ಕಾರ್ಯವನ್ನು ಮಾಡುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಬಾಗಿಯಾಗುವಂತೆ ಆದೇಶ ನೀಡಬೇಕೆಂದು ತಹಶೀಲ್ದಾರರಿಗೆ ಸೂಚಿಸಿದರು.

ರೆಡ್ಡಿ ಜನಾಂಗದ ಸಮುದಾಯ ಭವನಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 35ಲಕ್ಷ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯಡಿ 50ಲಕ್ಷದ ಅನುದಾನ ನೀಡಲಾಗಿದೆ. ಸಮುದಾಯದ ಮುಖಂಡರು 2ಕೋಟಿ ಬೇಡಿಕೆಯನ್ನು ಇಟ್ಟಿದ್ದು, ಮುಂದಿನ ದಿನಗಳಲ್ಲಿ ಯಾವುದಾದರೂ ವಿಶೇಷ ಅನುದಾನದಲ್ಲಿ ಸರ್ಕಾರದಿಂದ ಕೊಡಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷೆ, ತಹಶೀಲ್ದಾರ್ ಗೌಸಿಯಾ ಬೇಗಂ ಅವರು ಮಾತನಾಡಿ ಸಮಾಜದಲ್ಲಿ ಪ್ರತಿಯೊಬ್ಬ ಮನುಷ್ಯನು ಆದರ್ಶನೀಯವಾಗಿ ಬದುಕಲು ಬೇಕಾದಂತಹ ಎಲ್ಲಾ ಮಾರ್ಗಗಳನ್ನು ಆಗಿನ ಶರಣರು, ಮಹನೀಯರು ನಮಗೆ ಹಾಕಿಕೊಟ್ಟಿದ್ದಾರೆ.

ಆ ಎಲ್ಲಾ ಮಾರ್ಗಗಳನ್ನು ನಾವು ಅಳವಡಿಸಿಕೊಂಡು ಮುಂದಿನ ಪೀಳಿಗೆಯ ಮಕ್ಕಳಿಗೂ ಜಾಗೃತಿ ಮೂಡಿಸುವುದರೊಂದಿಗೆ ಸುಸಂಸ್ಕೃತಾಗಿ ಬಾಳೋಣವೆಂದು ತಿಳಿಸಿದರು.

ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಅವರು ಮಾತನಾಡಿ ಅಂದಿನ ಕಂದಾಚಾರ, ಮೂಡನಂಬಿಕೆಗಳನ್ನು ಹೋಗಲಾಡಿಸಲು ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಪದ್ಯಗಳನ್ನು ರಚಿಸುವ ಮೂಲಕ ಸಮಾಜದಲ್ಲಿನ ಮೇಲು ಕೀಳರಿಮೆಯನ್ನು ಹೋಗಲಾಡಿಸಿದವರಲ್ಲಿ ಶ್ರೀ ವೇಮನರೂ ಒಬ್ಬರಾಗಿದ್ದಾರೆಂದು ತಿಳಿಸಿದರು.

ರೆಡ್ಡಿ ಜನ ಸಂಘದ ಅಧ್ಯಕ್ಷ ಗೋಪಾಲರೆಡ್ಡಿ ಮಾತನಾಡಿ ಶ್ರೀ ವೇಮನರ ಚರಿತ್ರೆಯನ್ನು ಈಗಾಗಲೇ ಎಲ್ಲರೂ ತಿಳಿಸಿದ್ದಾರೆ. ಅವರು ಚರಿತ್ರೆಯನ್ನು ಹೇಳುತ್ತಾ ಹೋದರೆ ವರ್ಷಗಳೇ ಸಾಲುತ್ತವೆ. ಅವರು ತೋರಿಸಿದ ಸನ್ಮಾರ್ಗದಲ್ಲಿ ನಾವೆಲ್ಲಾ ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಅಲಿಮುರ್ತುಜಾ ಅವರು ಮಹಾಯೋಗಿ ವೇಮನರ ಜೀವನದ ಚರಿತ್ರೆಯ ಬಗ್ಗೆ ತಿಳಿಸಿದರು.

ಇದೇ ವೇಳೆ ರೆಡ್ಡಿ ಸಮುದಾಯದ ಮುಖಂಡರು ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳಿದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ