LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜುಲೈ 01 ರಂದು ತುರುವೇಕೆರೆಯಲ್ಲಿ ಶ್ರೀ ಸುಂಕಿಮಾರಮ್ಮದೇವಿ ಹಬ್ಬ

Advertisement
ತುರುವೇಕೆರೆ: ಪಟ್ಟಣದ 12ನೇ ವಾರ್ಡಿನಲ್ಲಿರುವ ಗಂಗಾಧರೇಶ್ವರ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಶ್ರೀ ಸುಂಕಿಮಾರಮ್ಮ ದೇವಿಯ ಹಬ್ಬವನ್ನು ಜುಲೈ 01 ರಂದು ಆಚರಿಸಲಾಗುವುದು.

ಕಳೆದ 40 ವರ್ಷಗಳಿಂದ ಪಟ್ಟಣದಲ್ಲಿ ಶ್ರೀ ಸುಂಕಿಮಾರಮ್ಮ ದೇವಿಯ ಹಬ್ಬವನ್ನು ಆಚರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮದೇವತೆ ಶ್ರೀ ಉಡುಸಲಮ್ಮ ದೇವಿಯ ಅಪ್ಪಣೆ ಪಡೆದು ತಾಯಿಯ ಆಜ್ಞಾನುಸಾರ ಶ್ರೀ ಸುಂಕಿಮಾರಮ್ಮ ದೇವಿ ಹಬ್ಬವನ್ನು ಆಚರಿಸಲು ತೀರ್ಮಾನಿಸಲಾಗಿದೆ.

ಜುಲೈ 01 ರಂದು ಮಂಗಳವಾರ ಸಂಜೆ 06 ಗಂಟೆಗೆ ಗಂಗಾಧರೇಶ್ವರ ದೇವಸ್ಥಾನದ ಮುಂಭಾಗದ (ಎನ್.ಹೆಚ್.ಪಿ.ಎಸ್. ಶಾಲೆ ಹತ್ತಿರ) ಆವರಣವನ್ನು ತಳಿರು ತೋರಣಗಳಿಂದ ಅಲಂಕರಿಸಿ ಶ್ರೀ ಸುಂಕಿಮಾರಮ್ಮ ದೇವಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ, ಆರತಿ ನೆರವೇರಿಸಲಾಗುವುದು.

ಜುಲೈ 02 ರಂದು ಬುಧವಾರ ದೇವಿಗೆ ಮಹಾಮಂಗಳಾರತಿ ನೆರವೇರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಭಕ್ತಿಪೂರ್ವಕವಾಗಿ ಪಟ್ಟಣದಿಂದ ಹೊರಗೆ ಕಳಿಸಲಾಗುವುದು. ಈ ದೇವಿಯ ಪೂಜೆ ಕಾರ್ಯಕ್ರಮದಲ್ಲಿ ಪಟ್ಟಣದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು‌ಆಯೋಜಕರು ಕೋರಿದ್ದಾರೆ.

ವರದಿ: ಗಿರೀಶ್ ಕೆ‌ ಭಟ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ