ಶ್ರೀಕೃಷ್ಣನ ಬಾಲಲೀಲೆಗಳು ಹಾಗೂ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.
ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಮಕ್ಕಳಿಗಾಗಿ ರಾಧಾ-ಶ್ರೀಕೃಷ್ಣ ವೇಷಭೂಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ರಾಧಾ ಹಾಗೂ ಶ್ರೀಕೃಷ್ಣರ ವೇಷಭೂಷಣಗಳನ್ನು ಧರಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಮಕ್ಕಳ ಆಕರ್ಷಕ ವೇಷಭೂಷಣಗಳು ಹಾಗೂ ಸಾಂಸ್ಕೃತಿಕ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದವು.

ಕಾರ್ಯಕ್ರಮದಲ್ಲಿ ನೇಗಿಲಯೋಗಿ ಸೇವಾ ಸಮಾಜದ ಅಧ್ಯಕ್ಷ ಹೆಚ್.ಆರ್. ರಂಗನಾಥ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ.ಆರ್. ಸುರೇಶ್, ಶಾಲೆಯ ಮುಖ್ಯಸ್ಥ ಯಶ್ವಂತ್ ಕೆ.ಹೆಚ್. ಅವರು ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿದರು.
ವರದಿ: ಗಿರೀಶ್ ಕೆ ಭಟ್
ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು.


