ಬೆಂಗಳೂರು : ಯಶವಂತಪುರದ ಎಪಿಎಂಸಿ ಯಾರ್ಡ್ 9ನೇ ಗೇಟ್ ಎದುರಿನ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಅಧ್ಯಕ್ಷ ಜೆ. ಸೆಲ್ವರಾಜ್ ರವರ ನೇತೃತ್ವದಲ್ಲಿ 15ನೇ ವರ್ಷದ ಜೀವೋದ್ಧಾರ ದಿನದ ಅಂಗವಾಗಿ ವಿಶೇಷ ಧಾರ್ಮಿಕ ಭಕ್ತಿ ಭಾವದಿಂದ ಆಚರಿಸಲಾಯಿತು.
ದೇವರಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ, ಮಹಾ ಮಂಗಳಾರತಿ ನೆರವೇರಿಸಲಾಯಿತು. ಬಳಿಕ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ , ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಆಶೀರ್ವಾದ ಪಡೆದ ತೀರ್ಥ ಪ್ರಸಾದ್ ಸ್ವೀಕರಿಸಿದರು.
ಬಿಜೆಪಿ ಮುಖಂಡರು ಹಾಗೂ ಹಿಂದೂಪರ ಹೋರಾಟಗಾರ ಮುನಿರಾಜು ಅವರು, "ಧಾರ್ಮಿಕ ಆಚರಣೆಗಳು ಸಮಾಜದಲ್ಲಿ ಐಕ್ಯತೆ, ಸಹೋದರತ್ವ ಮತ್ತು ಸೇವಾ ಮನೋಭಾವವನ್ನು ಹೆಚ್ಚಿಸುತ್ತವೆ. ದೇವಾಲಯವು ಕೇವಲ ಪೂಜೆಯ ಸ್ಥಳವಾಗಿರದೆ ಸಮಾಜ ಸೇವೆಯ ಕೇಂದ್ರವಾಗಬೇಕು ಎಂಬ ಉದ್ದೇಶದಿಂದ ಇಂತಹ ಧಾರ್ಮಿಕ ಹಾಗೂ ಸೇವಾ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.
ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಅಧ್ಯಕ್ಷ ಜೆ. ಸೆಲ್ವರಾಜ್ ಅವರು ಸರ್ವರಿಗೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ದೇವಾಲಯದ ಪ್ರಧಾನ ಅರ್ಚಕರಾದ ಚಂದ್ರಶೇಖರ್, ಮುಖಂಡರಾದ ಮಹೇಶ್, ಕೃಷ್ಣಮೂರ್ತಿ, ರಾಮಕೃಷ್ಣ ಸೇರಿದಂತೆ ಗಣ್ಯರು, ಭಕ್ತರು, ಸಾರ್ವಜನಿಕರು ಶ್ರೀ ವೀರಾಂಜನೇಯ ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ವರದಿ: ಅಯ್ಯಣ್ಣ ಮಾಸ್ಟರ್


