LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸತತ ಎರಡನೇ ಬಾರಿಗೆ ಟ್ವೆಂಟಿ-20 ಸರಣಿ ಗೆದ್ದ ಬಾಂಗ್ಲಾ

Advertisement
-------------------------------------------------------------ಪಾಕ್ ಗೆ ಕಡೆಯ ಪಂದ್ಯದಲ್ಲಿ ಸಮಾಧಾನಕರ ಗೆಲುವು

ಢಾಕಾ( ಬಾಂಗ್ಲಾದೇಶ): ಪ್ರವಾಸಿ ಪಾಕಿಸ್ತಾನ ತಂಡವು ಬಾಂಗ್ಲಾದೇಶ ವಿರುದ್ಧ ಇಲ್ಲಿ ನಡೆದ ಮೂರನೇ ಹಾಗೂ ಅಂತಿಮ ಟ್ವೆಂಟಿ-20 ಪಂದ್ಯವನ್ನು 74 ರನ್ ಗಳಿಂದ ಸುಲಭವಾಗಿ ಗೆದ್ದುಕೊಂಡಿತು.

ಶೆರೆ ಬಾಂಗ್ಲಾ ನ್ಯಾಷಿನಲ್ ಕ್ರೀಡಾಂಗಣದಲ್ಲಿ ಮುಗಿದ ಮೂರು ಪಂದ್ಯಗಳ ಸರಣಿಯ ಕಡೆಯ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದಿತಾದರೂ ಸರಣಿಯನ್ನು ಬಾಂಗ್ಲಾದೇಶ ತಂಡವೇ 2-1 ರಿಂದ ಪಡೆಯಿತು. ಇದರೊಂದಿಗೆ ಬಾಂಗ್ಲಾದೇಶ ತಂಡಕ್ಕೆ ಇದು ಸತತ ಎರಡನೇ ಟ್ವೆಂಟಿ-20 ಸರಣಿ ಗೆಲುವಾಗಿದೆ. ಇದಕ್ಕೆ ಮುನ್ನ ಶ್ರೀಲಂಕಾ ವಿರುದ್ಧ ಟ್ವೆಂಟಿ-20 ಸರಣಿಯನ್ನು ಜಯಿಸಿತ್ತು.  ಹೀಗಾಗಿ ಚುಟುಕು ಪಂದ್ಯಗಳಲ್ಲಿ ಬಾಂಗ್ಲಾದೇಶ ಹಿಡಿತ ಸಾಧಿಸುವತ್ತ ದಾಪುಗಾಲು ಹಾಕುತ್ತಿದೆ. ಬಾಂಗ್ಲಾದೇಶ ತಂಡದ ಜಾಕರ್ ಅಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ