Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಹಾಯವಾಣಿ ಆರಂಭ

Advertisement
ಬೆಂಗಳೂರು : ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ರಾಜ್ಯ ಸರ್ಕಾರ ಸಹಾಯವಾಣಿ ಆರಂಭಿಸಿದೆ. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025" ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಆರಂಭಿಸಲಾಗಿದ್ದು, ಸಮಾಜ ಕಲ್ಯಾಣ ಇಲಾಖೆ - ಕಂಟ್ರೋಲ್ ರೂಂ - 9482300400 ಹಾಗೂ ಜಸ್ಟಿಸ್ ನಾಗಮೋಹನ ದಾಸ್ ಆಯೋಗ (ಒಳ ಮೀಸಲಾತಿ ಕುರಿತು) - 9481359000 ಕ್ಕೆ ಸಂಪರ್ಕಿಸಬಹುದಾಗಿದೆ.ಈ ಸಹಾಯವಾಣಿಗಳು ಸಾರ್ವಜನಿಕರ ಅನುಕೂಲಕ್ಕಾಗಿ ದಿನದ 24 ಗಂಟೆಯೂ ಲಭ್ಯವಿರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಮಾಹಿತಿಯನ್ನು ವೈಜ್ಞಾನಿಕವಾಗಿ ಕಡಿಮೆ ಅವಧಿಯಲ್ಲಿ ಪಡೆಯುವ ಉದ್ದೇಶದಿಂದ ಇ – ಆಡಳಿತ ಇಲಾಖೆಯು ಅಭಿವೃದ್ಧಿಪಡಿಸಿರುವ ಮೊಬೈಲ್ ಆಯಪ್ ಮೂಲಕ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ.

ಮೊಬೈಲ್ ಆಯಪ್ ಅನ್ನು ಬೆಳಗ್ಗೆ 6.30 ರಿಂದ ಸಂಜೆ 6.30ರ ವರೆಗೆ ಎನೇಬಲ್ ಮಾಡಲಾಗಿರುತ್ತದೆ. ಸದರಿ ಅವಧಿಯಲ್ಲಿ ಗಣತಿದಾರರು ಮನೆಗಳಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರು / ಕುಟುಂಬದವರು ತಮ್ಮ ಜಾತಿಯ ಕುರಿತು ಮಾಹಿತಿಯನ್ನು ನೀಡಬೇಕು.

ಮನೆ – ಮನೆ ಸಮೀಕ್ಷೆ ಕೈಗೊಂಡ ಸಂದರ್ಭದಲ್ಲಿ ಮಾಹಿತಿ ಒದಗಿಸಲು ಸಾಧ್ಯವಾಗದೇ ಇರುವ ಪರಿಶಿಷ್ಟ ಜಾತಿಯ ಕುಟುಂಬದವರು ಸ್ವಯಂ ಪ್ರೇರಿತರಾಗಿ ವಿಶೇಷ ಶಿಬಿರಗಳಲ್ಲಿ ಭಾಗವಹಿಸಿ ಮಾಹಿತಿಯನ್ನು ಒದಗಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ