LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮುಂದಿನ ದಿನಗಳಲ್ಲಿ ರಾಜ್ಯದ 10-12 ಕಡೆ ಸಚಿವ ಸಂಪುಟ ಸಭೆ: ಡಿ.ಕೆ ಶಿವಕುಮಾರ್ 

Advertisement

ಬೆಂಗಳೂರು : ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ವೆಚ್ಚದ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್ ಇದರಲ್ಲಿ 16,000 ಕೋಟಿ ರೂ. ಗ್ರಾಮೀಣಾಭಿವೃದ್ಧಿ ಯೋಜನೆಯಾಗಿದ್ದು, ಉಳಿದ ಮೊತ್ತ ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿದೆ ಎಂದು ವಿವರಿಸಿದರು.

ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳು

ನಮ್ಮ ಸರ್ಕಾರ ಜನರ ಭಾವನೆಯನ್ನು ಗೌರವಿಸಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳು ಭಾಷೆ ಎರಡನೇ ಆಡಳಿತ ಭಾಷೆಯಾಗಿ ಘೋಷಣೆಯಾಗಬೇಕೆನ್ನುವ ಬೇಡಿಕೆ ಬಹಳ ದಿನಗಳದ್ದು. ಹಿಂದಿನವರು ಈ ತೀರ್ಮಾನ ಏಕೆ ಮಾಡಲಿಲ್ಲ ಎಂದು ಚರ್ಚಿಸುವುದಿಲ್ಲ. ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ. ಸಭೆಯಲ್ಲಿ ಅನೇಕ ಸಲಹೆಗಳು ಬಂದಿವೆ.

ನಮಗೆ ಬದ್ಧತೆ ಇದೆ. ನಾವು ಜನರ ಭಾವನೆ ಮೇಲಲ್ಲ; ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಭಾವನೆಗಳ ಆಧಾರದ ಮೇಲೆ ಸಮಾಜ ಕಟ್ಟಲ್ಲ. ಸಾಮಾಜಿಕ ಆರ್ಥಿಕ ಶಕ್ತಿ ತುಂಬಿ ಬದುಕು ಕಟ್ಟಿಕೊಡಲಾಗುವುದು ಎಂದು ತಿಳಿಸಿದರು.

ಅವಶ್ಯತೆ ಇದ್ದಲ್ಲಿ ಆರ್ಥಿಕ ಹಾಗೂ ಕಾನೂತುಳುಕಟ್ಟು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಸಭೆ ನಡೆಸುವ ತೀರ್ಮಾನ ಮಾಡಿ ಆಗ ಅಗತ್ಯವಿರುವ ವಿಚಾರಗಳ ಬಗ್ಗೆ ತೀರ್ಮಾನಿಸಲಾಗುವುದು. ಇದು ಟೀಮ್ ಕರ್ನಾಟಕ.

ಸಚಿವ ಸಂಪುಟ ನಿಮ್ಮ ಜೊತೆ ಇದೆ. ತುಳು ಭಾಷೆಯನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸೀಮಿತವಾಗಿ ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ ಮಾಡಲಾಗುವುದು.

ಮಾಜಿ ಸಚಿವ ರಮಾನಾಥ ರೈ ಅವರು ತುಳು ಭಾಷೆಗೆ 2 ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಲು ಮೊದಲು ಬೇಡಿಕೆ ಇಟ್ಟಿದ್ದರು ಎಂದು ಸ್ಮರಿಸಿದರು. ಸಚಿವ ಯು.ಟಿ. ಖಾದರ್‌, ಶಾಸಕ ಅಶೋಕ್‌ ಕುಮಾರ್‌ ರೈ ಸೇರಿದಂತೆ ಹಲವು ಜನಪ್ರತಿನಿಧಿಗಳು ಒಟ್ಟಾಗಿ ಒತ್ತಡ ಹೇರಿದ್ದರು ಎಂದು ಅವರು ತಿಳಿಸಿದರು.

ತುಳು ಭಾಷೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಅಂಗೀಕರಿಸಿದ ಹಿನ್ನೆಲೆಯಲ್ಲಿ ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಮುಖ್ಯಮಂತ್ರಿಗಳು ಅಭಿನಂದಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವುಬೆಳಗಾವಿಯಲ್ಲಿ ಅಕ್ರಮ ಪೆಟ್ರೋಲ್, ಡೀಸೆಲ್ ದಂಧೆ ಜಾಲ ಭೇದಿಸಿದ ಸಿಸಿಬಿ: ಇಬ್ಬರ ಬಂಧನ, ಲಕ್ಷಾಂತರ ರೂ. ಮೌಲ್ಯದ ಇಂಧನ ಜಪ್ತಿ!ಅವರಾದಿಯಲ್ಲಿ ಆಸ್ತಿಗಾಗಿ ತಂದೆ-ಮಗಳು ಕೊಲೆ , ಮೂವರು ಆರೋಪಿಗಳ ಬಂಧನಕಾರಾಗೃಹ ಇಲಾಖೆಯಲ್ಲಿ 576 ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ