ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸಚಿವ ಸಂಪುಟದ 15ನೇ ಸಭೆ ಜುಲೈ 2, 2026ರಂದು ನಡೆಯಲಿದೆ. ಈ ಕುರಿತು ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಚಿವಾಲಯ ಅಧಿಕೃತ ಸುತ್ತೋಲೆ ಹೊರಡಿಸಿದೆ.
ಸಚಿವ ಸಂಪುಟ ಸಚಿವಾಲಯದ ಸುತ್ತೋಲೆ ಸಂಖ್ಯೆ ಸಸ(ನಿ): 74/2026 ರ ಪ್ರಕಾರ, ಜುಲೈ 2, 2026ರಂದು ಗುರುವಾರ ಮಧ್ಯಾಹ್ನ 12.00 ಗಂಟೆಗೆ ವಿಧಾನಸೌಧದಲ್ಲಿ ಸಚಿವ ಸಂಪುಟದ 15ನೇ ಸಭೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಬೇಕಿರುವ ವಿಷಯಗಳನ್ನು ಸಂಬಂಧಿತ ಇಲಾಖೆಗಳು ತಕ್ಷಣ ಸಿದ್ಧಪಡಿಸಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.


