Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯ ಯೋಧರನ್ನು ಬೆಂಬಲಿಸಿ ರಾಜ್ಯ ಕಾಂಗ್ರೆಸ್ ನಾಯಕರ ತಿರಂಗಾ ಯಾತ್ರೆ

Advertisement
ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಿ ರಾಜ್ಯ ಕಾಂಗ್ರೆಸ್ ನಾಯಕರು ತಿರಂಗಾ ಯಾತ್ರೆ ನಡೆಸಿದರು.

ಬೆಂಗಳೂರಿನ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಇರುವ ಮಿನ್ಸ್ಕ್ ಸ್ಕ್ವೇರ್ ವರೆಗೆ ಹಮ್ಮಿಕೊಂಡ ತಿರಂಗಾ ಯಾತ್ರೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಭಾಗಿಯಾದರು. ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್​, ಸಚಿವರಾದ ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಮಾಂಕಾಳ ವೈದ್ಯ ಸೇರಿದಂತೆ ಕಾಂಗ್ರೆಸ್ ಶಾಸಕರು, ಮುಖಂಡರು ಪಾಲ್ಗೊಂಡರು.

ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ಭಾರತ್ ಮಾತಾ ಕಿ ಜೈ, ವಂದೇ ಮಾತರಂ, ಯೋಧರಿಗೆ ಜೈಕಾರ ಹಾಕುವ ಮೂಲಕ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಿದರು.

ತಿರಂಗಾ ಯಾತ್ರೆಯಿಂದ ಟ್ರಾಫಿಕ್ ಜಾಮ್ತಿರಂಗಾ ಯಾತ್ರೆಯಿಂದಾಗಿ ಕೆ.ಆರ್ ವೃತ್ತ, ವಿಧಾನಸೌಧ ರಸ್ತೆ, ಮೆಜೆಸ್ಟಿಕ್, ಆನಂದರಾವ್ ಸರ್ಕಲ್, ಕ್ವೀನ್ಸ್ ರೋಡ್, ನೃಪತುಂಗಾ ರೆಸ್ತೆ, ರಾಜಭವನ ರಸ್ತೆ ಸೇರಿದಂತೆ ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರಿ ಸಂಚಾರ ದಟ್ಟಣೆ ನಿರ್ಮಾಣವಾಯಿತು. ಈ ವೇಳೆ ವಾಹನ ಸವಾರರು ಪರದಾಡುವಂತಾಯಿತು. ಕಚೇರಿಗೆ ಹೋಗುವ ಸಮಯವಾಗಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು. ಗಂಟೆಗಟ್ಟಲೇ ಬಿಸಿಲಿಗೆ ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿದ ಹಲವು ವಾಹನ ಸವಾರರು ಸಂಚಾರ ನಿರ್ವಹಣೆ ಸೂಕ್ತವಾಗಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ