ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಡಿ.ದೇವರಾಜ ಅರಸು ರವರ 111 ನೇ ಜಯಂತಿ ಕಾರ್ಯಕ್ರಮವನ್ನು ಡಿ.ದೇವರಾಜ ಅರಸು ರವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸುವ ಮೂಲಕ ಚಾಲನೆ ನೀಡಿ ಮಾತನಾಡಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರವರು ರಾಜ್ಯದ ಅಭಿವೃದ್ದಿಯ ಹರಿಕಾರರಾಗಿದ್ದಾರೆ ಹಾಗೂ ವಿವಿಧ ಸಮಾಜಮುಖಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಎಲ್ಲಾ ಸಮುದಾಯಗಳ ಅಭಿವೃದ್ದಿಗೆ ಶ್ರಮಿಸಿದ್ದಾರೆ . ಇವರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಲ್ಲದೆ ಅವುಗಳು ಜನರಿಗೆ ತಲುಪುವಂತೆ ನೋಡಿಕೊಳ್ಳುವ ಮೂಲಕ ಜನರ ಅಭಿವೃದ್ದಿಗೆ ಶ್ರಮಿಸಿದರು.1974 ರಲ್ಲಿ ಊಳುವವನೇ ಭೂಮಿಯ ಒಡೆಯ ಎನ್ನುವ ಯೋಜನೆಯನ್ನು ಜಾರಿಗೆ ತಂದು ಸ್ವಂತ ತಮ್ಮ ಜಮೀನನ್ನು ಉಳುವ ರೈತರಿಗೆ ಬಿಟ್ಟುಕೊಡುವ ಮೂಲಕ ಇತರರಿಗೆ ಮಾದರಿಯಾದರು. ರಾಜ್ಯದಲ್ಲಿ ಜೀತಮುಕ್ತ ಪದ್ದತಿ.ವಸತಿ ಶಿಕ್ಷಣವನ್ನು ಎಲ್ಲಾರಿಗೂ ದೊರೆಯುವಂತೆ ಮಾಡಿದರು. ಸಿ.ಜಿ.ಹವಾನೂರ್ ಅಯೋಗವನ್ನು ರಚಿಸಿ ರಾಜ್ಯದ ಎಲ್ಲಾರಿಗೂ ಸಮಾನವಾದ ಮಿಸಲಾತಿಯನ್ನು ಹಂಚಿಕೆ ಮಾಡಿದರು. ಸಮಾಜದ ಎಲ್ಲಾ ಸಮುದಾಯಗಳು ತಮ್ಮ ಮಕ್ಕಳಿಗೆ ಸರಕಾರದ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣವನ್ನು ಕೊಡಿಸಿದ್ದಲ್ಲಿ ಅವರೆ ಸ್ವತಃ ಅವಕಾಶಗಳನ್ನು ಸೃಷ್ಟಿ ಮಾಡಿಕೊಳ್ಳುವ ಮೂಲಕ ಅವರ ಭವಿಷ್ಯವನ್ನು ಅವರೇ ರೂಪಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಪ್ರತಿಯೊಂದು ಸಮುದಾಯದವರು ಕೂಡ ಸರಕಾರದ ಯೋಜನೆಗಳ ಮಾಹಿತಿಯನ್ನು ಪಡೆದುಕೊಂಡು ಅವುಗಳ ಪ್ರಯೋಜನೆಯನ್ನು ಪಡೆದುಕೊಂಡಲ್ಲಿ ಮಾತ್ರ ಸರಕಾರದ ಜಯಂತಿಗಳಿಗೆ ನಿಜವಾದ ಅರ್ಥ ದೊರೆಯಲಿದೆ ಎಂದು ತಿಳಿಸಿದರು.
ಡಿ.ದೇವರಾಜ ಅರಸು ರವರ ಕುರಿತು ಶಿಕ್ಷಕರಾದ ಸುರೇಶ ವಿಶೇಷ ಉಪನ್ಯಾಸ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಹಿಂದುಳಿದ ಸಮುದಾಯಗಳ ಸಾಧಕರಿಗೆ ತಾಲೂಕು ಆಡಳಿತದಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಪರಶುರಾಮ್ ಬಿ.ದೇವಮಾನೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಭಾಗಯ್ಯನಾಯಕ ಪಿ.ಎಸ್.ಐ ಶರಣಪ್ಪ ಕೆ.ಹುಡಾ ಮುಖಂಡರಾದ ಮಹಾಂತೇಶ ಕಬ್ಬೇರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ವರದಿ : ಆಂಜನೇಯ ನಸಲಾಪುರ


