Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

Advertisement
ಬೆಂಗಳೂರು: ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆ, ನಿಗಮ/ ಮಂಡಳಿಗಳಲ್ಲಿನ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ.

ಈ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಅಧಿಸೂಚನೆ ಹೊರಡಿಸಬೇಕೆಂದು ಸಕ್ಷಮ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಲಾಗಿದೆ.ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಆಯುಕ್ತರ ಕಚೇರಿಯ ಆದೇಶ ನೀಡಿದೆ.

ಸರ್ಕಾರದ ವಿವಿಧ ಇಲಾಖೆಗಳು / ನಿಗಮಗಳು / ಮಂಡಳಿಗಳು / ವಿಶ್ವವಿದ್ಯಾಲಯಗಳು / ಸಹಕಾರ ಸಂಸ್ಥೆಗಳು / ಅನುದಾನಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಖಾಲಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಾಧಿಕಾರಗಳಿಂದಲೇ ಅಧಿಸೂಚನೆ / ಪ್ರಕಟಣೆಯನ್ನು ಹೊರಡಿಸಬೇಕಿರುತ್ತದೆ.

ಈ ಸಂಬಂಧವಾಗಿ, ಮಾನ್ಯ ಸಚಿವ ಸಂಪುಟದ ಉಪ ಸಮಿತಿ ಸಭೆಗಳಲ್ಲಿ, ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಗಳಲ್ಲಿ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗಳಲ್ಲಿ ಹಾಗೂ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗಳಲ್ಲಿ ಕೈಗೊಂಡ ತೀರ್ಮಾನದಂತೆ ಸರ್ಕಾರದ ವಿವಿಧ ಇಲಾಖೆಗಳು / ನಿಗಮಗಳು / ಮಂಡಳಿಗಳು / ವಿಶ್ವವಿದ್ಯಾಲಯಗಳು / ಸಹಕಾರ ಸಂಸ್ಥೆಗಳು / ಅನುದಾನಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಲಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕೃತ ಆದೇಶದಲ್ಲಿ ತಿಳಿಸಿದೆ.

ಸರ್ಕಾರದ ಆರ್ಥಿಕ ಇಲಾಖೆ ಈಗಾಗಲೇ ಅನುಮತಿ ನೀಡಿದೆ. ಈಗ ನೇಮಕ ಪ್ರಾಧಿಕಾರಗಳು ವಿವಿಧ ಇಲಾಖೆಗಳು / ನಿಗಮಗಳು / ಮಂಡಳಿಗಳು / ವಿಶ್ವವಿದ್ಯಾಲಯಗಳು / ಸಹಕಾರ ಸಂಸ್ಥೆಗಳು / ಅನುದಾನಿತ ಶೈಕ್ಷಣಿಕ ಸಂಸ್ಥೆಗಳು ನೀಡುವ ನಿಯಮಗಳ ಪ್ರಕಾರದ ಪ್ರಸ್ತಾವನೆಗಳನ್ನು ಪರಿಗಣಿಸಿ ಜೂನ್ ಅಥವಾ ಜುಲೈ ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡಿಗಡೆಯಾಗುವ ನಿರೀಕ್ಷೆ ಇದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್