ಹುಬ್ಬಳ್ಳಿ: ಕುರುಬ ಸಮಾಜ ಅಭಿವೃದ್ಧಿ ವೇದಿಕೆ ಕರ್ನಾಟಕ ವತಿಯಿಂದ ರಾಜ್ಯಸಭೆಗೆ ನೂತನ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ಪ್ರೋ.ಮಾ.ನಾಗರಾಜ ಅವರಿಗೆ ರಾಜ್ಯಮಟ್ಟದ ಅಭಿನಂದನಾ ಸಮಾರಂಭವನ್ನು ಜೂನ್ 28 ರಂದು ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಕುಸುಗಲ್ ರಸ್ತೆಯ ಶ್ರೀನಿವಾಸ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಎಂದು ಸಮಾಜದ ಮುಖಂಡರಾದ ರವಿ ದಂಡಿನ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಅಂದು ಕಾಗಿನೆಲೆಯ ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಪೀಠಾಧಿಪತಿ ನಿರಂಜನಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸಮಾರಂಭ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾದ ಮಾ.ನಾಗರಾಜ ಅವರನ್ನು ಸನ್ಮಾನಿಸಲಾಗುವುದು. ಹಾಗೂ ಅವರಿಗೆ ಸ್ಥಾನ ಲಭಿಸಲು ಶ್ರಮಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸ್ಥಳೀಯ ಶಾಸಕರು & ಮುಖಂಡರನ್ನು ವೇದಿಕೆ ವತಿಯಿಂದ ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಅಖಂಡ ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಪ್ರದೇಶಗಳಿಂದ ಸುಮಾರು 3 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ ಮಕ್ಕಳಗಿರಿ, ಬೀರಪ್ಪ ಖಂಡೇಕರ್, ಪರಶುರಾಮ ದಿವಾನದ, ಸಿದ್ದಪ್ಪ ಮುರಗೋಡ, ದೇವರಾಜ ಕಂಬಳಿ, ಡಿ.ಟಿ.ಪಾಟೀಲ್, ಹೆಚ್.ಡಿ.ಪಾಟೀಲ್, ಮಾಲತೇಶ ಶ್ಯಾಗೋಟಿ ಪಾಲ್ಗೊಂಡಿದ್ದರು.
ವರದಿ: ಸುಧೀರ್ ಕುಲಕರ್ಣಿ


