LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಎಸ್‌ಐಆರ್‌ ಕುರಿತು ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಸತೀಶ್ ಜಾರಕಿಹೊಳಿ ಸ್ಪಷ್ಟನೆ

Advertisement

ಬೆಂಗಳೂರು : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ತಾವು ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್‌ (X) ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಸರಿಯಾಗಿದೆ ಎಂಬ ಅರ್ಥದಲ್ಲಿ ತಾವು ಯಾವುದೇ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಫಾರಂ-7 ಮೂಲಕ ಕಾಂಗ್ರೆಸ್ ಬೆಂಬಲಿಗ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಬಿಜೆಪಿಯ ಷಡ್ಯಂತ್ರವನ್ನು ವಿಫಲಗೊಳಿಸಲಾಗಿದೆ ಎಂಬುದು ತಮ್ಮ ಹೇಳಿಕೆಯ ಉದ್ದೇಶವಾಗಿತ್ತು ಎಂದು ತಿಳಿಸಿದ್ದಾರೆ.

ಬಿಜೆಪಿ ವಿರುದ್ಧ ಕಾಂಗ್ರೆಸ್ ಹೋರಾಟ

ರಾಹುಲ್ ಗಾಂಧಿ ಅವರ ಹೋರಾಟ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಈ ಪ್ರಯತ್ನವನ್ನು ಯಶಸ್ವಿಯಾಗಿ ಎದುರಿಸಲಾಗಿದೆ. ಈ ಹೋರಾಟಕ್ಕೆ ಬೆಳಗಾವಿ ಜಿಲ್ಲೆಯಿಂದಲೇ ಚಾಲನೆ ನೀಡಲಾಗಿತ್ತು ಎಂದು ಹೇಳಿದ್ದಾರೆ.

ಅರ್ಹ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ತಾವು ಮೊದಲಿನಿಂದಲೂ ವಿರೋಧಿಸುತ್ತಾ ಬಂದಿದ್ದೇನೆ.

ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕುವ ಪ್ರಯತ್ನಗಳನ್ನು ಬಲವಾಗಿ ವಿರೋಧಿಸುತ್ತೇನೆ ಎಂದು ಜಾರಕಿಹೊಳಿ ಹೇಳಿದ್ದಾರೆ.

ಮತದಾನದ ಹಕ್ಕು ಕಸಿತದ ವಿರೋಧ

ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಪ್ರತಿಯೊಬ್ಬರ ಮತದಾನದ ಹಕ್ಕಿನ ರಕ್ಷಣೆಗಾಗಿ ರಾಹುಲ್ ಗಾಂಧಿ ಅವರೊಂದಿಗೆ ದೃಢವಾಗಿ ನಿಲ್ಲುವುದಾಗಿ ಪುನರುಚ್ಚರಿಸಿರುವ ಅವರು, ತಮ್ಮ ಹೇಳಿಕೆಯ ನೈಜ ಆಶಯವನ್ನು ತಪ್ಪಾಗಿ ಅರ್ಥೈಸದೆ ಗ್ರಹಿಸಬೇಕು ಎಂದು ಮನವಿ ಮಾಡಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 3 ವರ್ಷ ಹೊಸ ಖಾಸಗಿ ಪಿಯು ಕಾಲೇಜುಗಳಿಗೆ ಅನುಮತಿ ಇಲ್ಲ: ರಾಜ್ಯ ಸರ್ಕಾರ ಅಧಿಸೂಚನೆಅಹಿಂದ ನಾಯಕತ್ವದ ಉತ್ತರಾಧಿಕಾರಿ ಪಟ್ಟಾಭಿಷೇಕಕ್ಕೆ ಕಾಲ ಇನ್ನೂ ಪಕ್ವವಾಗಿಲ್ಲ : ಸತೀಶ್ ಜಾರಕಿಹೊಳಿದೇಶದಲ್ಲಿ ಬಡತನ ಪ್ರಮಾಣ ಶೇ. 27.1ರಿಂದ 2.6ಕ್ಕೆ ಕುಸಿತ: ವಿಶ್ವಬ್ಯಾಂಕ್ ವರದಿನಮಗೆ ಕುಡಿಯಲು ನೀರಿಲ್ಲ, ದನಕರುಗಳಿಗೂ ನೀರಿಲ್ಲ : ಡಿಸಿ ಎದುರು ಗ್ರಾಮಸ್ಥರ ಅಳಲು.:ತಕ್ಷಣ ಸರಿಪಡಿಸಲು ಆದೇಶ.ವಿದ್ಯುತ್ ಶಾಕ್‌ನಿಂದ ಗಾಯಗೊಂಡ ಕೋತಿಗೆ ಚಿಕಿತ್ಸೆ  ಮಾಡಿ ಮಾನವೀಯತೆ ಮೆರೆದ ಅರಣ್ಯ ಅಧಿಕಾರಿಗಳುನವೆಂಬರ್ 2 ರಿಂದ ಕರ್ನಾಟಕ- ಆಸ್ಸಾಮ್ ರಣಜಿ ಟ್ರೋಫಿ ಪಂದ್ಯ ಎಸ್‌ಐಆರ್‌ ಕುರಿತು ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಸತೀಶ್ ಜಾರಕಿಹೊಳಿ ಸ್ಪಷ್ಟನೆಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ : ಶಾಸಕ ಮಹಾಂತೇಶ ಕೌಜಲಗಿ ಭಾವುಕ ಪೋಸ್ಟ್ಕೇಪ್ ಟೌನ್ ಟೆಸ್ಟ್ : ಆಸ್ಟ್ರೇಲಿಯಾ ಉತ್ತಮ ಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಗೆ 55 ರನ್ ಗಳ ಗೆಲುವು