Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಕ್ಫ ಕುರಿತು ಬಿಜೆಪಿ ಪಕ್ಷದಿಂದ ರಾಜ್ಯಾದ್ಯಂತ ಪ್ರತಿಭಟನೆ.

Advertisement
ಕಲಘಟಗಿ:-ವಕ್ಫ ಕುರಿತು ಕಾಂಗ್ರೆಸ್‌ ಸರ್ಕಾರವು ಕೀಳು ಮಟ್ಟದ ಆಡಳಿತ ಮಾಡುತ್ತಿದೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ,ಬಿಜೆಪಿ ಮುಖಂಡ ನಾಗರಾಜ ಛಬ್ಬಿ ಹೇಳಿದರು.

ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪತ್ರಿಕಾ ಗೋಷ್ಟಿ ಉದ್ದೇಶಿಸಿ ಮಾತನಾಡಿದರು. ಅನೇಕ ತಲೆಮಾರುಗಳಿಂದ ಬಂದ ಬಡವರ, ರೈತರ, ಹಾಗೂ ಮಠ ಮಾನ್ಯಗಳ ಸಾವಿರಾರು ಎಕರೆ ಜಮೀನುಗಳನ್ನು ವಕ್ಫ ಆಸ್ತಿಗಳನ್ನಾಗಿ ಮಾಡಲು ಕಾಂಗ್ರೆಸ್‌ ಸರ್ಕಾರವು ಹೊರಟಿದೆ. ಇಂತಹ ಅನೇಕ ಆಸ್ತಿಗಳನ್ನು ವಕ್ಫ ಆಸ್ತಿಗಳಂತ ದಾಖಲು ಮಾಡುತ್ತಿದ್ದಾರೆ. ಜಾತಿಗಳನ್ನು ಮುಂದಿಟ್ಟುಕೊಂಡು ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ. ಹಳೆಯ ಇತಿಹಾಸ ನೋಡಿದಾಗ ಅದು ರೈತರದ್ದೇ ಜಮೀನು. ಸನ್ಮಾನ್ಯ ಮೋದಿಜಿಯವರ ಬಿಜೆಪಿ ಸರ್ಕಾರ ಈ ಕಾನೂನಿಗೆ ತಿದ್ದುಪಡಿ ತಂದು ಪೂರ್ಣ ವಿರಾಮ ಹಾಕುವ ಕೆಲಸ ಮಾಡುತ್ತಿದೆ. ಈ ಕುರಿತು ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಪ್ರತಿಭಟನೆಯ ಮೂಲಕ ಮನವಿ ಅರ್ಪಿಸುತ್ತೇವೆ ಎಂದರು.

ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಛಬ್ಬಿಯವರು ಅತೀವೃಷ್ಠಿಯಿಂದ ಸಂಪೂರ್ಣ ಬೆಳೆ ಹಾಳಾಗಿದ್ದರೂ ರೈತನಿಗೆ ಕಿಂಚಿತ್ತೂ ಪರಿಹಾರ ಕೊಡುತ್ತಿಲ್ಲ ಎಂದರು. ನಂತರ ಮಾತನಾಡಿದ ಜಿಲ್ಲಾ ಬಿಜೆಪಿ ಗ್ರಾಮೀಣ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ ಮಾತನಾಡಿ ಇದು ಭಾರತ ದೇಶ. ಇಲ್ಲಿ ಸಿರಿಯಾ ದೇಶದ ಕಾನೂನು ನಡೆಯುವುದಿಲ್ಲ. ಮುತ್ಸದ್ದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೆಬ್ರು ಈ ಕೂಡಲೇ ಸಚಿವ ಜಮೀರ ಅಹಮದ್‌ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಈ ಪ್ರತಿಭಟನೆಯು ಕೇಂದ್ರ ಸರ್ಕಾರದ ನಿರ್ದೇಶನದಂತೆ ಕರ್ನಾಟಕದಾದ್ಯಂತ ಏಕ ಕಾಲಕ್ಕೆ ನಡೆಯಲಿದ್ದು ಮಾನ್ಯ ಜಿಲ್ಲಾಧಿಕಾರಿಯವರಿಗೆ ಮನವಿ ಕೊಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಮದನ್‌ ಕುಲಕರ್ಣಿ, ಅಣ್ಣಪ್ಪ ಓಲೇಕಾರ, ತಾಲೂಕು ಬಿಜೆಪಿ ಅದ್ಯಕ್ಷ ಯಲ್ಲಾರಿ ಶಿಂಧೆ, ಪಟ್ಟಣ ಪಂಚಾಯತಿ ಉಪಾದ್ಯಕ್ಷ ಗಂಗಾಧರ ಗೌಳಿ, ಮಾಜಿ ಜಿ.ಪಂ ಸದಸ್ಯ ಬಸವರಾಜ ಕರಡಿಕೊಪ್ಪ, ಶಶಿಧರ ಹುಲಿಕಟ್ಟಿ, ಸದಾನಂದ ಚಿಂತಾಮಣಿ, ಪರಶುರಾಮ ಹುಲಿಹೊಂಡ, ಬಸವರಾಜ ಹೊನ್ನಳ್ಳಿ, ವಿನಾಯಕ ಗೌಳಿ ಮುಂತಾದವರು ಉಪಸ್ಥಿತರಿದ್ದರು. ಸೋಮು ಕೊಪ್ಪದ ಸ್ವಾಗತಿಸಿದರು.

ವರದಿ : ಶಶಿಕುಮಾರ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ