Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ : ಆಲ್ ದ ಬೆಸ್ಟ್

Advertisement
ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ತಯಾರಿ ಅಂತಿಮ ಘಟ್ಟ ತಲುಪಿದೆ.

ಫೆಬ್ರವರಿ 28ರ ನಾಳೆಯಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಶಿಕ್ಷಣ ಇಲಾಖೆಯು ಪರೀಕ್ಷಾ ಅಕ್ರಮ ತಡೆಯಲು ಮತ್ತು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (KSRTC), ಬಿಎಂಟಿಸಿ ಸಿಹಿ ಸುದ್ದಿ ನೀಡಿದೆ.

ಫೆಬ್ರವರಿ 28 ರಿಂದ ಆರಂಭವಾಗಲಿರುವ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

KSRTC ಬಸ್ ಗಳಲ್ಲಿ ಉಚಿತ ಪ್ರಯಾಣ : ಪ್ರವೇಶ ಪತ್ರವೇ ಬಸ್ ಪಾಸ್!

ಪರೀಕ್ಷಾ ಕೇಂದ್ರಗಳು ವಿದ್ಯಾರ್ಥಿಗಳ ಸ್ವಂತ ವಿದ್ಯಾಸಂಸ್ಥೆಗಿಂತ ಬೇರೆಡೆ ನಿಯೋಜನೆಯಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಈ ಕೆಳಗಿನ ಮಾರ್ಗಸೂಚಿಗಳ ಅನ್ವಯ ಸೌಲಭ್ಯ ಪಡೆಯಬಹುದು:

ದಿನಾಂಕ: 2026ರ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ (ಪರೀಕ್ಷೆ ನಡೆಯುವ ದಿನಗಳಂದು ಮಾತ್ರ).

ಅಗತ್ಯ ದಾಖಲೆ: ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ ವಿದ್ಯಾರ್ಥಿಗಳು ತಮ್ಮ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಪ್ರವೇಶ ಪತ್ರ (Hall Ticket) ತೋರಿಸುವುದು ಕಡ್ಡಾಯ.

ಬಸ್ಸುಗಳ ವಿವರ: ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ (Ordinary & Express) ಬಸ್ಸುಗಳಲ್ಲಿ ಈ ಉಚಿತ ಪ್ರಯಾಣಕ್ಕೆ ಅವಕಾಶವಿರುತ್ತದೆ.

ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಲು ಈ ಕ್ರಮ ಸಹಕಾರಿಯಾಗಲಿದೆ ಎಂದು ಸಾರಿಗೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

BMTC ಬಸ್ ಗಳಲ್ಲಿ ಉಚಿತ ಪ್ರಯಾಣ

2025-26 ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ. ಆ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಬಗ್ಗೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ.

2025-26 ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ದಿನಾಂಕ 28.02.2026 ರಿಂದ 17.03.2026 ರವರೆಗೆ ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡಂತೆ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ.

ಪಿ.ಯು.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳಿಗೆ ದಿನಾಂಕ 28.02.2026 ರಿಂದ 17.03.2026 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಪಿ.ಯು.ಸಿ ಪರೀಕ್ಷೆ-1 ರ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.

ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಪರೀಕ್ಷಾ ವೇಳಾಪಟ್ಟಿ ಮತ್ತು ಸಮಯ

ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10:00ರಿಂದ ಮಧ್ಯಾಹ್ನ 1:00ರವರೆಗೆ ನಡೆಯಲಿವೆ. ಪ್ರಮುಖ ದಿನಾಂಕಗಳು ಹೀಗಿವೆ:

ಫೆಬ್ರವರಿ 28: ಕನ್ನಡ, ಅರೇಬಿಕ್

ಮಾರ್ಚ್ 3: ಇಂಗ್ಲಿಷ್

ಮಾರ್ಚ್ 5: ಇತಿಹಾಸ

ಮಾರ್ಚ್ 6: ಭೌತಶಾಸ್ತ್ರ

ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ

ಮಾರ್ಚ್ 10: ಅರ್ಥಶಾಸ್ತ್ರ

ಮಾರ್ಚ್ 13: ರಾಜ್ಯಶಾಸ್ತ್ರ

ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ

ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ