LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸ್ಟಿಂಗ್ ಆಪರೇಷನ್ : ಇಬ್ಬರು ಸೇರಿ ಹೆಸರು ರಿವೀಲ್ ಮಾಡಿದ ಸಿದ್ದರಾಮಯ್ಯ

Advertisement

ಮೈಸೂರು: ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಸುದೀರ್ಘ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಕೆಲ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ನನ್ನ ಗಮನಕ್ಕೆ ಬಂತು. ಒಬ್ಬ ಪತ್ರಕರ್ತ ಮತ್ತು ಮಂಗಳೂರಿನ ಕೃಪಾ ಆಳ್ವಾ ಸೇರಿಕೊಂಡು ಈ ಕೆಲಸ ಮಾಡಿದ್ದಾರೆ ಎಂದರು.

ಸ್ಟಿಂಗ್ ಆಪರೇಶನ್ ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆಯಾಗಬೇಕು. ಜನರಿಗೆ ಸತ್ಯಾಂಶ ತಿಳಿಯಬೇಕು ಎನ್ನುವ ಉದ್ದೇಶದಿಂದ ನಾನೇ ಸ್ವಯಂಪ್ರೇರಿತವಾಗಿ ಪೊಲೀಸರಿಗೆ ದೂರು ನೀಡಿದ್ದೇನೆ. ಸ್ಟಿಂಗ್ ಆಪರೇಷನ್ ನಲ್ಲಿ ಯಾವುದೇ ಹುರುಳಿಲ್ಲ, ಸಂಪೂರ್ಣ ಸತ್ಯಕ್ಕೆ ದೂರವಾದ ಆರೋಪವಿದು ಎಂದು ತಿಳಿಸಿದರು.

ನಾನು ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಇಂತಹ ಯಾವುದೇ ಕೃತ್ಯಗಳು ನಡೆದಿರಲಿಲ್ಲ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ಇಂತಹ ಕೀಳು ಆರೋಪ ಬಂದೇ ಇರಲಿಲ್ಲ. ಈಗಿನ ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಬ್ಲಾಕ್‌ಮೇಲ್ ತಂತ್ರಗಳನ್ನು ಮಾಡುತ್ತಿದ್ದಾರೆ.

 ನಾನು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡದ ಮೇಲೆ ನನಗೆ ಯಾರ ನೈತಿಕ ಬೆಂಬಲವೂ ಬೇಕಾಗಿಲ್ಲ, ಯಾರೂ ನನ್ನ ಪರವಾಗಿ ನಿಲ್ಲಬೇಕಾದ ಅಗತ್ಯವೂ ಇಲ್ಲ ಎಂದು ಹೇಳಿದರು.

ರಾಜಕೀಯ ಲಾಭಕ್ಕಾಗಿ ಕೆಲವರು ಮಾತನಾಡುತ್ತಿದ್ದಾರೆ, ಮಾತನಾಡಿಕೊಳ್ಳಲಿ. ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕು. ಇದರ ಹಿಂದೆ ಸ್ವಪಕ್ಷದವರಿದ್ದಾರೋ ಅಥವಾ ವಿರೋಧ ಪಕ್ಷದವರಿದ್ದಾರೋ ಎಂಬುದು ತನಿಖೆಯ ನಂತರವೇ ತಿಳಿಯಲಿದೆ ಎಂದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST