Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸಗೊಬ್ಬರ, ಕೀಟನಾಶಕ, ಬೀಜಗಳನ್ನು ಆಕ್ರಮವಾಗಿ ದಾಸ್ತಾನು ಮಾಡುವುವರ ವಿರುದ್ಧ ಕಠಿಣ ಕ್ರಮ : ಶಾಸಕ ಜಿ ಎಸ್ ಪಾಟೀಲ

Advertisement
ರೋಣ:ರಸಗೊಬ್ಬರ, ಕೀಟನಾಶಕ, ಬೀಜಗಳನ್ನು ಆಕ್ರಮವಾಗಿ ದಾಸ್ತಾನು ಮಾಡುವುದಾಗಲಿ, ಅಧಿಕ ದರಕ್ಕೆ ಮಾರಾಟ ಮಾಡುವುದಾಗಲಿ ಕಂಡು ಬಂದಲ್ಲಿ ಅಂತಹ ಮಾರಾಟ ಮಳಿಗೆಗಳ ಮಾಲೀಕರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸಿ ಎಂದು ಶಾಸಕ ಜಿ.ಎಸ್. ಪಾಟೀಲ ಕೃಷಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ರವಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಯೋಜನೆಯಡಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು

ರೈತರೊಬ್ಬರು ದೂರು ನೀಡಿ ಕೆಲವರು ಹೆಚ್ಚಿನ ಬೆಲೆಯಲ್ಲಿ ರೈತರಿಗೆ ಗೊಬ್ಬರ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದ ಹಿನ್ನೆಲೆಯಲ್ಲಿ ಶಾಸಕರು ಕೃಷಿ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಕ್ರಮ ಜರುಗಿಸಲು ಸಂಪೂರ್ಣ ಅಧಿಕಾರ ನೀಡಿದರು.

 

https://youtu.be/gcAHhnuZagM

ಸಹಾಯಕ ಕೃಷಿ ನಿರ್ದೇಶಕ ಎಸ್.ಎಫ್, ತಹಶೀಲ್ದಾರ್ ಮಾತನಾಡಿ, ಹಿಂಗಾರು ಹಂಗಾಮಿಗಾಗಿ ಬಿತ್ತನೆ ಬೀಜಗಳನ್ನು ಈಗಾಗಲೇ ಸಂಗ್ರಹಿಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ರೋಣ ತಾಲೂಕಲ್ಲಿ 27500 ಹೆಕ್ಟೇರ್‌ಬೆಳೆ ಹಾನಿಯಾಗಿದೆ. ಜಂಟಿ ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.

ಗಜೇಂದ್ರಗಡ ತಾಲೂಕಲ್ಲಿ 13700 ಹೆಕ್ಟೇರ್‌ಬೆಳೆ ಹಾನಿಯಾಗಿದೆ. ಬೆಳೆ ಹಾನಿ ಸರ್ವೇ ಬಿಟ್ಟು ಹೋದ ಜಮೀನಿನ ಆಕ್ಷೇಪಣೆಗೆ ಗ್ರಾಪಂ ಮಟ್ಟದಲ್ಲಿ ಡಿಸ್ ಪ್ಲೇ ಪ್ರದರ್ಶಿಸಿ ಹೆಸರಿಲ್ಲದವರಿಂದ ಅರ್ಜಿ ಕರೆಯಲಾಗಿತ್ತು ಎಂದು ಕೃಷಿ ಅಧಿಕಾರಿ ಸಬೂಬು ನೀಡಿದರು. ಆದರೆ ಶಾಸಕರು ಜಿಪಿಎಸ್ ಬಿಟ್ಟು ಹೋಗಿದ್ದು ಏಕೆ ಉತ್ತರಿಸಿ ಎಂದು ಪಟ್ಟು ಹಿಡಿದರು. ರೈತರಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ ಎಂದು ಕೆಲ ರೈತರು ಆರೋಪಿಸಿದರು. ತಾಲ್ಲೂಕಿನ ವಿವಿಧ ಗ್ರಾಮಗಳ ರೈತರು, ಕೃಷಿ.ತೋಟಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ