LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಥಣಿ : ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು 

Advertisement
ಬೆಳಗಾವಿ : ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಒಟ್ಟು 13 ಜನರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಶಾಲೆಯಲ್ಲಿ ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಎಂಬ ಗ್ರಾಮದಲ್ಲಿ ನಡೆದಿದೆ.

ರೇಣುಕಾ ಸಂಜಯ ಬಂಡಗಾರ (15) ಮೃತ ಬಾಲಕಿ ಹೆಸರು. ಚಮಕೇರಿ ಗ್ರಾಮದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಳಗಿನ ಜಾವ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ, ಅಸ್ವಸ್ಥಳಾಗಿ ಕುಸಿದುಬಿದ್ದಳು.

ಮೊದಲು ಶಿಕ್ಷಕರು ಗಂಭೀರತೆಯನ್ನು ಅರ್ಥಮಾಡಿಕೊಳ್ಳದಿದ್ದರೂ, ಹೃದಯಾಘಾತದ ಲಕ್ಷಣಗಳು ಕಾಣುತ್ತಿದ್ದಂತೆಯೇ ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಮುಂದಾದರು

ಪೋಷಕರ ಸಹಕಾರದಿಂದ ಕೂಡಲೇ ಅಥಣಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತು. ಆದರೆ ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವಲ್ಲಿಯೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ.

ಬೇಡರ ಹಟ್ಟಿ ಗ್ರಾಮದ ವಿದ್ಯಾರ್ಥಿನಿ ರೇಣುಕಾ ಸಾವನ್ನಪ್ಪಿದ್ದಾಳೆ. ಘಟನೆ ಕುರಿತಂತೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್ಮದುವೆ ಆಗಲು ಹೆಣ್ಣು ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆ ಗದಗ ತಾಲೂಕು ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ. ಪಾಟೀಲ್ಮಾಜಿ ಸಚಿವ ಬಿ. ರಮಾನಾಥ ರೈ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರುಎಶಿಯನ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್: ಪೈನಲ್ ಗೆ ಜಿಗಿದ ಭಾರತ ವನಿತೆಯರು ವಾಷಿಂಗ್ ಮಷಿನ್, ಫ್ರಿಡ್ಜ್‌ಗೆ ಬೆಂಕಿ : ಇಡೀ ಮನೆ ಆವರಿಸಿದ ಬೆಂಕಿ, ಓರ್ವ ಸಜೀವ ದಹನಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರು