Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅವೈಜ್ಞಾನಿಕ ಹಂಪ್ ಗೆ ವಿದ್ಯಾರ್ಥಿನಿ ಬಲಿ 

Advertisement
ಹಾಸನ: ಅವೈಜ್ಞಾನಿಕ ಹಂಪ್ ನಿಂದಾಗಿ ಬೈಕ್ ಮೇಲಿನಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಎಂದಿನಂತೆ ಸ್ನೇಹಿತೆಯೊಂದಿಗೆ ಬೈಕ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಅವೈಜ್ಞಾನಿಕ ಹಂಪ್ ನಿಂದಾಗಿ ಬೈಕ್ ನಿಂದ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಪ್ರಿಯಾ ಮೃತ ವಿದ್ಯಾರ್ಥಿನಿ. ಎಂಸಿಎ ಅಂತಿಮ ವರ್ಷದಲ್ಲಿ ವ್ಯಸಂಗ ಮಾಡುತ್ತಿದ್ದಳು. ಇಂದು ಬೆಳಿಗ್ಗೆ ತನ್ನ ಸ್ನೇಹಿತೆಯೊಂದಿಗೆ ಬುಲೆಟ್ ಬೈಕ್ ನಲ್ಲಿ ಹೋಗುತ್ತಿದ್ದಾಗ ರಸ್ತೆಗೆ ಅಡ್ಡಲಾಗಿ ನಿರ್ಮಿಸಿದ್ದ ಹಂಪ್ ಗೊತ್ತಾಗದೇ ವೇಗವಾಗಿ ಬಂದ ಬೈಕ್ ಪಲ್ಟಿಯಾಗಿ ಬಿದ್ದಿದೆ.

ಬೈಕ್ ನಿಂದ ಕೆಳಗೆ ಬಿದ್ದ ರಭಸಕ್ಕೆ ಪ್ರಿಯಾಳ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಪ್ರಿಯಾ ಸ್ನೇಹಿತೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾಳೆ.

ನಗರದಲ್ಲಿ ನಿರ್ಮಿಸಿರುವ ಅವೈಜ್ಞಾನಿಕ ಹಂಪ್ ನಿಂದಾಗಿಯೇ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನ ಮಹಾನಗರ ಪಾಲೆಕೆಯಾದ್ಯಂತ ಹಂಪ್ ಗಳನ್ನು ಅಳವಡಿಸಲಾಗಿದ್ದು ಬಹುತೇಕ ಕಡೆ ಅವೈಜ್ಞಾನಿಕವಾಗಿ ಹಂಪ್ ಅಳವಡಿಸಲಾಗಿದೆ.

ಯಾವುದೇ ಸೂಚನಾ ಫಲಕಗಳಾಗಲಿ, ಹಂಪ್ ಮೇಲೆ ವೈಟ್ ಪಟ್ಟಿಯಾಗಲಿ ಹಾಕದೇ ಬೃಹತ್ ಹಂಪ್ ಗಳನ್ನು ನಿರ್ಮಿಸಿರುವುದು ಅನಾಹುತಕ್ಕೆ ಕಾರಣವಾಗುತ್ತಿದೆ.

ವಾಹನಗಳ ವೇಗ ನಿಯಂತ್ರಕ ಹಂಪ್ ಗಳು ಜನರ ಜೀವಕ್ಕೆಕುತ್ತಾಗಿ ಪರಿಣಮಿಸುತ್ತಿವೆ. ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಜನರು ಕಿಡಿಕಾರಿದ್ದಾರೆ. ನಗರಗಳಲ್ಲಿರುವ ಅವೈಜ್ಞಾನಿಕ ಹಂಪ್ ಗಳನ್ನು ಅರಿಪಡಿಸುವಂತೆ ಆಗ್ರಹಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ