ಮಾನ್ವಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ವಿಚಾರಧಾರೆಗಳನ್ನು ಸಾರ್ವಜನಿಕರು ಹಾಗೂ ಯುವ ಸಮುದಾಯಕ್ಕೆ ಪರಿಚಯಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು ಸಭೆ ಕಾರ್ಯಕ್ರಮವನ್ನು ಅ.8ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಬಿ.ವಿ.ಆರ್. ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ವಿವಿಧ ಸರ್ಕಾರಿ ಪ್ರೌಢಶಾಲೆಗಳು, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಧಾನಸಭೆಯಲ್ಲಿ ನಡೆಯುವ ಅಧಿವೇಶನದ ಅಣುಕು ಪ್ರದರ್ಶನ ನಡೆಸಲಿದ್ದಾರೆ. ಯುವಜನರಲ್ಲಿ ಪ್ರಜಾಪ್ರಭುತ್ವದ ಮಹತ್ವ, ವಿಧಾನಸಭೆಯ ಕಾರ್ಯವೈಖರಿ ಹಾಗೂ ಸಂಸದೀಯ ಪ್ರಕ್ರಿಯೆಗಳ ಕುರಿತು ಅರಿವು ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ತಾಲೂಕಿನ ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಸಾಹಿರಾಬಾನು ನದಾಫ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ವರದಿ : ಆಂಜನೇಯ ನಸಲಾಪುರ


