Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡೆತ್ ನೋಟ್ ಬರೆದಿಟ್ಟು ಉಪತಹಶೀಲ್ದಾರ್ ಆತ್ಮಹತ್ಯೆ 

Advertisement

ಹಾಸನ: ಮೈಸೂರು ಜಿಲ್ಲೆಯ ಸಾಲಿಗ್ರಾಮದ ಉಪತಹಶೀಲ್ದಾರ್ ಅವರು ಹಾಸನ ನಗರದ ಬಿ.ಎಂ. ರಸ್ತೆಯಲ್ಲಿರುವ ಲಾಡ್ಜ್‌ ಒಂದರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ನಡೆದಿದೆ. 

ಮೃತರನ್ನು 52 ವರ್ಷದ ತಿಮ್ಮಯ್ಯ ಎಂದು ಗುರುತಿಸಲಾಗಿದೆ. ಮೇ 30ರ ಶನಿವಾರದಂದು ಈ ದುರ್ಘಟನೆ ಬೆಳಕಿಗೆ ಬಂದಿದ್ದು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದಲ್ಲಿ ತೀವ್ರ ದಿಗ್ಭ್ರಮೆ ಉಂಟುಮಾಡಿದೆ.

ಆತ್ಮಹತ್ಯೆಗೂ ಮುನ್ನ ಉಪತಹಶೀಲ್ದಾರ್ ತಿಮ್ಮಯ್ಯ ಅವರು ನಾಲ್ಕು ಪುಟಗಳ ಸುದೀರ್ಘ ಡೆತ್‌ನೋಟ್ ಬರೆದಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ಲಾಡ್ಜ್‌ನ ರೂಮಿನಲ್ಲಿ ಅವರ ಮೃತದೇಹ ಪತ್ತೆಯಾದ ಸಂದರ್ಭದಲ್ಲಿ ಈ ಡೆತ್‌ನೋಟ್ ಲಭ್ಯವಾಗಿದೆ.

ತಮ್ಮ ಸಾವಿಗೆ ಕಾರಣಗಳೇನು ಎಂಬುದನ್ನು ಅವರು ಅದರಲ್ಲಿ ಉಲ್ಲೇಖಿಸಿದ್ದು, ಪೊಲೀಸರು ಸದ್ಯ ಈ ಡೆತ್‌ನೋಟ್ ಅನ್ನು ವಶಕ್ಕೆ ಪಡೆದುಕೊಂಡು ತನಿಖೆ ಆರಂಭಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಹಾಸನ ನಗರದ ಬಡಾವಣೆ ಠಾಣೆಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದರ ಕುರಿತು ಕುಟುಂಬಸ್ಥರು ಹಾಗೂ ಕಚೇರಿಯ ಸಹೋದ್ಯೋಗಿಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST