ಬೆಳಗಾವಿ : ಜಿಲ್ಲಾ ಮಟ್ಟದ ಖೋಖೋ ಪಂದ್ಯಾವಳಿ ನಡೆಯುತ್ತಿದ್ದ ವೇಳೆ ಏಕಾಏಕಿ ಗಲಾಟೆ (Fighting) ಉಂಟಾಗಿ ಇಬ್ಬರು ಗಾಯಗೊಂಡ (Shocking) ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ರಾಯಬಾಗ ಹಾಗೂ ಅಥಣಿ ತಂಡಗಳ ನಡುವೆ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಗಲಾಟೆ ನಡೆದಿದೆ. ಫೈನಲ್ ಪಂದ್ಯಾವಳಿ ನಡೆಯುತ್ತಿದ್ದ ವೇಳೆ ಏಕಾಏಕಿ ವಿಶಿಲ್ (ಸೀಟಿ) ಹೊಡೆದ ವಿಚಾರಕ್ಕೆ ಎರಡು ಕಡೆಯವರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಗಲಾಟೆ ನಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಲಾಲಸಾಬ್ ಹಾಗೂ ಸುನೀಲ್ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನೂ ಚಿಕಿತ್ಸೆಗಾಗಿ ಅಥಣಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರಿಗೂ ಚಿಕಿತ್ಸೆ ಮುಂದುವರಿದಿದೆ.
ಪಂದ್ಯಾವಳಿ ವೇಳೆ ನಡೆದ ಗಲಾಟೆ ಕುರಿತು ಮಾಹಿತಿ ಪಡೆದ ಅಥಣಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ನಿಖರ ಕಾರಣ ಹಾಗೂ ಗಲಾಟೆಯಲ್ಲಿ ಭಾಗಿಯಾದವರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಪ್ರಕರಣ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


