Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಠಾತ್ ಕೈ ಶಾಸಕರ ‘ಫೋಟೋ ಶೂಟ್’ : ರಾಜಕೀಯ ವಲಯದಲ್ಲಿ ತಲ್ಲಣ

Advertisement

ಬೆಂಗಳೂರು : ವಿಧಾನಸೌಧದಲ್ಲಿ ಇಂದು ನಡೆದ ಶಾಸಕರ ಸಮೂಹ ಫೋಟೋ ಶೂಟ್ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ.


ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ 'ಮೇಜರ್ ಸರ್ಜರಿ' ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.


ಒಂದೆಡೆ ಹೊಸ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿ ಮಟ್ಟದಲ್ಲಿ ಒತ್ತಡ ಹೇರುತ್ತಿದ್ದರೆ, ಇನ್ನೊಂದೆಡೆ ನಾಯಕತ್ವ ಬದಲಾವಣೆಯ ಗುಸುಗುಸು ಶುರುವಾಗಿದೆ.


ಈ ಎಲ್ಲಾ ಬೆಳವಣಿಗೆಗಳ ನಡುವೆ ನಡೆದ ಫೋಟೋ ಶೂಟ್, ಯಾವುದೋ ದೊಡ್ಡ ಬದಲಾವಣೆಯ ಮುನ್ಸೂಚನೆಯೇ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.


ವಿಧಾನಸಭೆಯ ಅವಧಿ ಮುಗಿಯಲು ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ಸ್ಪೀಕರ್ ಯು.ಟಿ. ಖಾದರ್ ಅವರು ಹಠಾತ್ ‘ಫೋಟೋ ಶೂಟ್’ ಆಯೋಜಿಸಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗಳಿಗೆ ಕಾರಣವಾಗಿದೆ.


ಸಾಮಾನ್ಯವಾಗಿ ಇಂತಹ ಸಮೂಹ ಚಿತ್ರೀಕರಣವು ವಿಧಾನಸಭೆಯ ಐದು ವರ್ಷಗಳ ಅವಧಿ ಮುಗಿಯುವ ಕೊನೆಯ ಅಧಿವೇಶನದಲ್ಲಿ ನಡೆಯುತ್ತದೆ. ಆದರೆ ಈಗಲೇ ಫೋಟೋ ಶೂಟ್ ನಡೆಸಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.


ಮಾರ್ಚ್ 25, 2026ರಂದು (ಬುಧವಾರ) ವಿಧಾನಸೌಧದ ಮುಂಭಾಗದಲ್ಲಿ ಶಾಸಕರ ಸಮೂಹ ಫೋಟೋ ಶೂಟ್ ಆಯೋಜಿಸಲಾಗಿತ್ತು. ಮಂಗಳವಾರವಷ್ಟೇ ವಿಧಾನ ಪರಿಷತ್ ಸದಸ್ಯರ ಫೋಟೋ ಶೂಟ್ ಕೂಡ ನಡೆದಿತ್ತು.


ಕಾರಣವೇನು?


ಸ್ಪೀಕರ್ ಕಚೇರಿಯ ಮೂಲಗಳ ಪ್ರಕಾರ ಇದು ಕೇವಲ ಒಂದು ಸಂಪ್ರದಾಯಬದ್ಧ ಪ್ರಕ್ರಿಯೆ ಮತ್ತು ಇದರಲ್ಲಿ ವಿಶೇಷವೇನಿಲ್ಲ. ಆದರೆ, ಮಧ್ಯಂತರದಲ್ಲಿ ಇಂತಹ ಕಾರ್ಯಕ್ರಮ ನಡೆದಿರುವುದು “ಮುಂದಿನ ದಿನಗಳಲ್ಲಿ ದೊಡ್ಡ ಬದಲಾವಣೆಗಳಾಗಲಿವೆಯೇ?” ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.


ರಾಜಕೀಯ ಸಂಚಲನ


ಈ ಫೋಟೋ ಶೂಟ್ ಬೆನ್ನಲ್ಲೇ ಹಲವು ವದಂತಿಗಳು ಹರಿದಾಡುತ್ತಿವೆ:


ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ಅರ್ಧ ಅವಧಿ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರವಾಗಬಹುದು ಎಂಬ ಚರ್ಚೆ ದಟ್ಟವಾಗಿದೆ. ಈ ಫೋಟೋ ಶೂಟ್ ಹಾಲಿ ಶಾಸಕರ ಕೊನೆಯ ಚಿತ್ರವಾಗಬಹುದೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.


ಸಂಪುಟ ಪುನರಚನೆ(Cabinet Reshuffle): ಸುಮಾರು 30ಕ್ಕೂ ಹೆಚ್ಚು ಹಿರಿಯ ಮತ್ತು ಹೊಸ ಶಾಸಕರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ.


ಬಜೆಟ್ ಅಧಿವೇಶನದ ನಂತರ ಸಂಪುಟದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗುವ ಸಾಧ್ಯತೆ ಇದೆ. ಹಿರಿಯ ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.


ಸ್ಪೀಕರ್ ಬದಲಾವಣೆ?: ಸ್ಪೀಕರ್ ಯು.ಟಿ. ಖಾದರ್ ಅವರು ಸಚಿವ ಸಂಪುಟ ಸೇರಲಿದ್ದಾರೆ ಮತ್ತು ಅವರ ಜಾಗಕ್ಕೆ ಬೇರೆಯವರನ್ನು ನೇಮಿಸಲಾಗುತ್ತದೆ ಎಂಬ ವದಂತಿಗಳೂ ಇವೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ