ಬೆಳಗಾವಿ: ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ರಾಜ್ಯದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆಗಿನ ಉನ್ನತ ಮಟ್ಟದ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅನೇಕ ವಿಚಾರಗಳನ್ನ ಚರ್ಚೆ ಮಾಡಿದರು.
ಕಬ್ಬು ಬೆಳೆಗಾರರ ದರ ನಿಗದಿ ಹೋರಾಟ, ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಆರ್ಥಿಕ ಸವಾಲುಗಳು ಹಾಗೂ ಮಾರುಕಟ್ಟೆಯ ಬಿಕ್ಕಟ್ಟಿನ ಕುರಿತು ವಿವರವಾಗಿ ಚರ್ಚಿಸಿದ ಅವರು, 'ರೈತರು ಮತ್ತು ಕಾರ್ಖಾನೆ ಮಾಲೀಕರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ.
ಇಬ್ಬರ (Belagavi) ಉಳಿವು ಹಾಗೂ ಹಿತರಕ್ಷಣೆ ಮಾಡುವುದು ಸರ್ಕಾರದ (Karnataka Government) ಜವಾಬ್ದಾರಿ' ಎಂದು ಸ್ಪಷ್ಟಪಡಿಸಿದರು.
ಕಬ್ಬಿಗೆ ದರ ನಿಗದಿಗೆ ರೈತರ ಬೇಡಿಕೆ
ಕಳೆದ ಒಂದು ದಶಕದಿಂದ ಸಕ್ಕರೆ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆಯಾಗಿಲ್ಲ. ಇದರಿಂದಾಗಿ ರೈತರಿಗೆ ಕೃಷಿ ವೆಚ್ಚ ಹಾಗೂ ಕಬ್ಬು ಸಾಗುವಳಿ ವೆಚ್ಚ ಗಣನೀಯವಾಗಿ ಹೆಚ್ಚಾಗಿದ್ದು, ಬೆಳೆಗಾರರು ತೀವ್ರ ನಷ್ಟ ಎದುರಿಸುತ್ತಿದ್ದಾರೆ.
ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 6,000 ರೂಪಾಯಿವರೆಗೆ ಬೆಲೆ ನಿಗದಿಪಡಿಸಬೇಕು ಎಂದು ಸರ್ಕಾರ ಹಾಗೂ ಕಾರ್ಖಾನೆ ಮಾಲೀಕರ ಮುಂದೆ ಬೇಡಿಕೆ ಇಟ್ಟಿದ್ದಾರೆ.
ರೈತರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ತಾವೇ ಸ್ವತಃ ಕಿತ್ತೂರಿಗೆ ತೆರಳಿ ಅವರ ಅಹವಾಲು ಆಲಿಸಿದ್ದನ್ನು ನೆನಪಿಸಿಕೊಂಡ ಸಿಎಂ, ಈ ಸಮಸ್ಯೆಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು. ಈ ಸಮಸ್ಯೆಯು ಬರೀ ಕರ್ನಾಟಕಕ್ಕೆ ಸೀಮಿತವಾಗಿರದೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಬಿಹಾರ ಮತ್ತು ಉತ್ತರ ಪ್ರದೇಶಗಳಲ್ಲೂ ವ್ಯಾಪಿಸಿದೆ ಎಂದು ತಿಳಿಸಿದರು.


