LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ 

Advertisement

ಬೆಳಗಾವಿ :  ಕಬ್ಬಿಗೆ ಪ್ರೋತ್ಸಾಹಧನ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದು ಬೆಳಗಾವಿ ಜಿಲ್ಲೆಯಲ್ಲಿ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಹಾಗೂ ಗೌರವ ಅಧ್ಯಕ್ಷರನ್ನು ವಶಕ್ಕೆ ಪಡೆದಿರುವ ಸುದ್ದಿ ಹರಡುತ್ತಿದ್ದಂತೆ ರೈತರು ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ.

ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈಗಿನಿಂದಲೇ ನಾಳೆ ಅಂದರೆ ನವೆಂಬರ್ 06ರ ಬೆಳಗ್ಗೆ 6 ಗಂಟೆ ವರೆಗೂ ಮದ್ಯ ಮಾರಾಟ ನಿಷೇಧ ಮಾಡಿ ಪ್ರಬಾರಿ ಡಿಸಿ ರಾಹುಲ್ ಶಿಂಧೆ ಆದೇಶ ಹೊರಡಿಸಿದ್ದಾರೆ.

ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ರೈತರು, ಚೂನಪ್ಪ ಪೂಜಾರಿ ಮತ್ತು ಶಶಿಕಾಂತ ಗುರೂಜಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ನಾಯಕರನ್ನು ವಶಕ್ಕೆ ಪಡೆದಿರುವ ಕ್ರಮವನ್ನು ಖಂಡಿಸಿದ ಪ್ರತಿಭಟನಾಕಾರರು, ತಮ್ಮ ಹೋರಾಟ ಮುಂದುವರಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಇದನ್ನೂ ನೋಡಿ: ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿ ಹೊರವಲಯದಲ್ಲೇ ಹೋರಾಟಗಾರರು ವಶಕ್ಕೆ

ಇತ್ತ ಬೆಳಗಾವಿ ಜಿಲ್ಲೆಯ ಹಲವು ಭಾಗಗಳಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೆಲವೆಡೆ ರಸ್ತೆ ತಡೆ ನಡೆಸಲಾಗಿದ್ದು, ರಾಜ್ಯ ಹೆದ್ದಾರಿಗಳಲ್ಲಿಯೂ ಸಂಚಾರಕ್ಕೆ ಅಡ್ಡಿಯಾಗಿದೆ.

ಇದರಿಂದ ಸ್ಥಳೀಯವಾಗಿ ವಾಹನ ಸಂಚಾರದ ಮೇಲೆ ಪರಿಣಾಮ ಉಂಟಾಗಿದೆ. ಇನ್ನು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮತ್ತಷ್ಟು ರೈತರು ಸ್ಥಳಕ್ಕೆ ಬರುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿಯನ್ನು ಪೊಲೀಸರು ಗಮನಿಸುತ್ತಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ40 ವರ್ಷದ ಬ್ರಿಂಡನ್ ಟೇಲರ್ ಭರ್ಜರಿ ಶತಕ ಅಮೀರ್ ಜಂಗೋ ಶತಕ: ದೊಡ್ಡ ಮೊತ್ತದತ್ತ ವೆಸ್ಟ್ ಇಂಡೀಸ್ ಬೆಂಗಳೂರಿಗೆ ಅಣ್ಣನ ಆರೋಗ್ಯ ವಿಚಾರಿಸಲು ಬಂದ ರಜನಿಕಾಂತ್ ರೈತರ ಖಾತೆಗೆ ₹2,500 ಬೆಳೆ ಪರಿಹಾರ ಜಮೆ : ಹಣ ಬಿಡುಗಡೆಗೆ ಸಿಎಂ ಚಾಲನೆ