Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾದಕ ಪದಾರ್ಥಗಳ ಸರಬರಾಜು ಆರೋಪ ಕೇಸ್ ರದ್ದು: ಸುಪ್ರೀಮ್ ಮೆಟ್ಟಿಲೆರಲು ಸಿಸಿಬಿ ಸಿದ್ದತೆ

Advertisement
ಬೆಂಗಳೂರುಉದ್ಯಮಿಗಳು, ಸೆಲೆಬ್ರಿಟಿಗಳಿಗೆ ಮಾದಕ ಪದಾರ್ಥಗಳನ್ನು ಸರಬರಾಜು ಮಾಡುತ್ತಿದ್ದ ಆರೋಪದಡಿ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಮತ್ತು ಪ್ರಶಾಂತ್ ರಂಕ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ‌, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

ಹೈಕೋರ್ಟ್ಹೇಳಿದ್ದೇನು?: ಆರೋಪಪಟ್ಟಿಯಲ್ಲಿ ಸಾಕ್ಷ್ಯಾಧಾರಗಳು ಮತ್ತು ಇತರೆ ಆರೋಪಿಗಳ ಹೇಳಿಕೆಗಳನ್ನು ಹೊರತುಪಡಿಸಿದರೆ ಅರ್ಜಿದಾರರು ಪಾರ್ಟಿಗಳನ್ನು ಆಯೋಜನೆ ಮಾಡುವುದು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡಿರುವ ಸಂಬಂಧ ತನಿಖಾಧಿಕಾರಿಗಳು ಯಾವುದೇ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ. ಹೀಗಾಗಿ, ಅರ್ಜಿದಾರರ ವಿರುದ್ದ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆ ಮುಂದುವರೆಯುವುದು ಕಾನೂನಿನ ದುರ್ಬಳಕೆಯಾಗುತ್ತದೆ ಎಂದಿದ್ದ ಹೈಕೋರ್ಟ್‌ ಪ್ರಕರಣವನ್ನು ರದ್ದು ಮಾಡಿತ್ತು.

ಈ ಬಗ್ಗೆ ಗೃಹ ಮತ್ತು ಕಾನೂನು ಇಲಾಖೆಯ ಸಮ್ಮತಿ ಪಡೆದಿರುವ ಸಿಸಿಬಿ ಅಧಿಕಾರಿಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಂ ಕೋರ್ಟ್‌ನಲ್ಲಿ ಇಂದು ಅಥವಾ ನಾಳೆ ಮೇಲ್ಮನವಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ಸಿಸಿಬಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಕಾಟನ್ ಪೇಟೆ ಠಾಣೆಯಲ್ಲಿ ಸಿಸಿಬಿ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದುಗೊಳಿಸುವಂತೆ ಕೋರಿ ನಟಿ ರಾಗಿಣಿ ದ್ವಿವೇದಿ ಹಾಗೂ ಪ್ರಶಾಂತ್ ರಂಕಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ