
ದೈ.ಶಿ ಸಂಘದ ಅಧ್ಯಕ್ಷರಾದ ಆರ್ ವಾಯ್ ನಧಾಪ ಇವರು ಕ್ರೀಡಾಜ್ಯೋತಿ ಬೆಳಗಿಸುವುದರೊಂದಿಗೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಅಶ್ರುಪ್ ಬಂಧಗಿ ಅವರು ಮಾತನಾಡಿ ನಿರ್ಣಾಯಕರ ನಿರ್ಣಯಕ್ಕೆ ಗೌರವ ಕೊಡಬೇಕೆಂದು ಕ್ರೀಡಾಪಟುಗಳಿಗೆ ತಿಳಿಸಿದರು.ಇದೇ ವೇಳೆ ಕ್ರೀಡಾಕೂಟಕ್ಕೆ ಸಹಾಯ ಮಾಡಿದ ದಾನಿಗಳನ್ನು ಸತ್ಕರಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾದ ಆರ್ ಪಿ ಬೆಟಗೇರಿ ಅವರು ಕ್ರೀಡಾಕೂಟದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ವಿಠ್ಠಲ ಯಲಿಗೋಡ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು. ಎಂ ಎಸ್ ಮೇಟಿ ಪ್ರ.ಗುರುಗಳು ಕ್ರೀಡಾ ಪ್ರತಿಜ್ಞಾವಿಧಿ ಭೋದಿಸಿದರು. ಕಾರ್ಯಕ್ರಮದ ಸಾನಿಧ್ಯ ವಹಿಸಿದ ಶ್ರೀ ಕುಮಾರ ಹಿರೇಮಠ ಸ್ವಾಮಿಗಳು ನುಡಿಗಳನ್ನಾಡಿ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಿ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಶ್ರಮಿಸುವಂತೆ ಶ್ರೀಗಳು ಆಶೀರ್ವಚನ ನೀಡಿದರು. ಶಿಕ್ಷಕರಾದ ಶಂಕರ ಕೊಣ್ಣೂರ ಕಾರ್ಯಕ್ರಮ ನಿರೂಪಿಸಿದರು.ಎಂ ಎಸ್ ಮೇಟಿ. ಪ್ರ.ಗುರುಗಳು ವಂದಿಸಿದರು.
ವರದಿ: ಕುಮಾರ ಎಮ್

