Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ

Advertisement
ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿದ್ದಾರೆ. ಇದೇ ಹೊತ್ತಲ್ಲಿ ಹೆಚ್.ಡಿ. ರೇವಣ್ಣ ಅವರ ಮತ್ತೊಬ್ಬ ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.

ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಈ ಕುರಿತಾಗಿ ಡಿಜಿಪಿ, ಎಸ್.ಪಿ., ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ದೂರು ನೀಡಲಾಗಿದೆ.

ದೂರು ನೀಡಿದ ಯುವಕನ ವಿರುದ್ಧವೇ ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಗೆ ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪಹೊರಿಸಿ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ದೂರು ನೀಡಿದ್ದಾರೆ. ಆತ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿರುವುದಾಗಿ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಐದು ಕೋಟಿ ರೂಪಾಯಿ ಕೊಡದಿದ್ದರೆ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಆರೋಪಿಸಿದ್ದ ಯುವಕ ಸುಳ್ಳು ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ ಎಂದು ಶಿವಕುಮಾರ್ ದೂರು ಸಲ್ಲಿಸಿದ್ದಾರೆ.

ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಮನವಿ ಮಾಡಿದ್ದ. ನೀನೇ ಹೋಗಿ ಬಾಸ ಭೇಟಿ ಮಾಡು ಎಂದು ಅವರ ಫೋನ್ ನಂಬರ್ ಕೊಟ್ಟಿದ್ದೆ.

ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ ಆತ ನನಗೆ ನೀವು ಕೆಲಸ ಕೊಡಿಸಿಲ್ಲ. ನನಗೆ ಹಣ ಬೇಕಿದೆ, ನಿಮ್ಮ ಬಾಸ್ ನಿಂದ 5 ಕೋಟಿ ರೂ. ಕೊಡಿಸದಿದ್ದರೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುತ್ತೇನೆ ಎಂದು ಯುವಕ ಬೆದರಿಕೆ ಹಾಕಿದ್ದಾನೆ ಶಿವಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಜ್ವಲ್ ಸೂರಜ್ ರೇವಣ್ಣ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದು, ತಮ್ಮ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಯುವಕ ದೂರು ನೀಡಿದ್ದಾನೆ ಡಿಜಿಪಿ, ಎಸ್.ಪಿ., ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ