Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಂದಾನಗರಿಯಲ್ಲಿ ಬಾಂಗ್ಲಾದೇಶಿಗಳ ಶಂಕೆ : ಬಸ್ ನಿಲ್ದಾಣದಲ್ಲೇ 20 ಜನ ವಶಕ್ಕೆ 

Advertisement

ಬೆಳಗಾವಿ: ಕುಂದಾನಗರಿಯಲ್ಲಿ ಬಾಂಗ್ಲಾದೇಶದ ಅಕ್ರಮ ನಿವಾಸಿಗಳು ಬೀಡುಬಿಟ್ಟಿದ್ದಾರೆಂಬ ಸುಳಿವು ಸಿಗುತ್ತಿದ್ದಂತೆ ನಗರದ ಬಸ್ ನಿಲ್ದಾಣದ ಸಮೀಪ ಪೊಲೀಸ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. 

ಹುಬ್ಬಳ್ಳಿಯ ಮಾರ್ಗವಾಗಿ ಮೂರು ವಾಹನಗಳಲ್ಲಿ ಅಪರಿಚಿತರು ಆಗಮಿಸಿದ್ದಾರೆಂದು ಹಿಂದೂ ಸಂಘಟನೆಯ ಪ್ರಮುಖರು ನೀಡಿದ ದೂರಿನ ಮೇರೆಗೆ ಎಚ್ಚೆತ್ತ ಪೊಲೀಸರು, ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ಮಾಳಮಾರುತಿ ಪೊಲೀಸ್ ಕೇಂದ್ರಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.

ಈ ಕಾರ್ಯಾಚರಣೆ ವೇಳೆ ಪತ್ತೆಯಾದ ಕಾರ್ಮಿಕರು ತಾವು ಬಾಂಗ್ಲಾದೇಶದವರಲ್ಲ ಎಂದು ಸ್ಪಷ್ಟಪಡಿಸಿದ್ದು, ಭಾರತದ ಪಶ್ಚಿಮ ಬಂಗಾಳದ ನಿವಾಸಿಗಳಾಗಿದ್ದು ಇಲ್ಲಿನ ಶಹಾಪುರದಲ್ಲಿ ಚಿನ್ನದ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾರೆ. 

ಚುನಾವಣೆ ಮುಗಿಸಿ ಮರಳುತ್ತಿದ್ದ ಈ ಗುಂಪಿನ ಗುರುತಿನ ಚೀಟಿ, ಮೊಬೈಲ್ ಮತ್ತು ಮತದಾನದ ದಾಖಲೆಗಳನ್ನು ಅಧಿಕಾರಿ ನಾರಾಯಣ ಭರಮನಿ ಅವರ ಸಮ್ಮುಖದಲ್ಲಿ ಕೂಲಂಕಷವಾಗಿ ಪರಿಶೀಲಿಸಲಾಗಿದೆ.

ಸದ್ಯ ಈ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ವೇಳೆ, ಪ್ರಾಥಮಿಕ ತನಿಖೆಯಲ್ಲಿ ಇವೆಲ್ಲವೂ ನೈಜವಾಗಿ ಕಂಡಿದ್ದರಿಂದ ಸುಮಾರು 20ಕ್ಕೂ ಹೆಚ್ಚು ಕಾರ್ಮಿಕರ ಹೆಬ್ಬೆರಳ ಗುರುತುಗಳನ್ನು ಸಂಗ್ರಹಿಸಿ, ಆ ಬಳಿಕ ಅವರನ್ನು ಸ್ವಸ್ಥಾನಕ್ಕೆ ಕಳುಹಿಸಲಾಗಿದೆ. ಆದರೆ ಆಂತರಿಕವಾಗಿ ತಾಂತ್ರಿಕ ತನಿಖೆ ಇನ್ನೂ ಜಾರಿಯಲ್ಲಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ರಾನ್ಸ್ನಲ್ಲಿ ವಿಶ್ವದ ಅಗ್ರಗಣ್ಯ ನಾಯಕರ ಜಿ-೭ ಸಭೆರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ