LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬೆಳಗಾವಿ : ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಸ್ವಾಮೀಜಿಗೆ 35 ವರ್ಷ ಕಠಿಣ ಶಿಕ್ಷೆ 

Advertisement
ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಮೇಕಳಿ‌ ಗ್ರಾಮದ ರಾಮಲಿಂಗ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿಗೆ (30) ಇಲ್ಲಿನ ಜಿಲ್ಲಾ ಪೋಕ್ಸೊ ನ್ಯಾಯಾಲಯ 35 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹1 ಲಕ್ಷ ದಂಡ ವಿಧಿಸಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ಲೋಕೇಶ್ವರ ಸಾಬಣ್ಣ ಜಂಬಗಿ ಎಂಬಾತ ಮೇಕಳಿ ಗ್ರಾಮದಲ್ಲಿ ಮಠ ಕಟ್ಟಿಕೊಂಡು ಸ್ವಾಮೀಜಿ ಎಂದು ಘೋಷಿಸಿಕೊಂಡಿದ್ದ.

ಇದೇ ವರ್ಷದ ಮೇ 13ರಂದು ಪಿಯು ಓದುತ್ತಿದ್ದ ಬಾಲಕಿಯನ್ನು ತನ್ನ ಕಾರಿನಲ್ಲಿ ಮನೆಗೆ ಬಿಡುವ ನೆಪದಲ್ಲಿ ಅಪಹರಿಸಿದ್ದ. ಬಾಗಲಕೋಟೆ ಮೂಲಕ ಮಂತ್ರಾಲಯಕ್ಕೆ ಕರೆದೊಯ್ದು ಮೇ 14ರಂದು ಲಾಡ್ಜ್‌ನಲ್ಲಿ ಅತ್ಯಾಚಾರ ಮಾಡಿದ್ದ. ಮೇ 16ರಂದು ಬಾಗಲಕೋಟೆಗೆ ಕರೆತಂದು ಮತ್ತೆ ಲಾಡ್ಜ್‌ನಲ್ಲಿ ಅತ್ಯಾಚಾರ ಎಸಗಿದ್ದ. ನಂತರ ಆಕೆಯನ್ನು ಮಹಾಲಿಂಗಪುರ ಬಸ್‌ ನಿಲ್ದಾಣದಲ್ಲಿ ಬಿಟ್ಟು ಪರಾರಿಯಾಗಿದ್ದ.

ಈ ಸಂಬಂಧ ಬಾಲಕಿ ಪಾಲಕರು ಮೂಡಲಗಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖಾಧಿಕಾರಿ ಶ್ರೀಶೈಲ ಬ್ಯಾಕೋಡ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಶನಿವಾರ (ಡಿ.20) ತೀರ್ಪು ಪ್ರಕಟಿಸಿದ್ದಾರೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸಂತ್ರಸ್ತೆಗೆ ₹4 ಲಕ್ಷ ಪರಿಹಾರ ನೀಡುವಂತೆ ಮತ್ತು ಆ ಹಣವನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ 5 ವರ್ಷ ಠೇವಣಿ ಇಡುವಂತೆಯೂ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್‌.ವಿ.ಪಾಟೀಲ ವಾದ ಮಂಡಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ