ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದ್ದು, ಶೇಕಡಾ 99ರಷ್ಟು ಮುಂಬರುವ ಸೋಮವಾರದಂದೇ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆಯಿದೆ.
ಈ ಕುರಿತು ವಿಧಾನಸೌಧದಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಸೋಮವಾರವೇ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಎಷ್ಟು ಜನರಿಗೆ ಸಚಿವ ಸ್ಥಾನ?:
ಸಂಪುಟಕ್ಕೆ ಎಷ್ಟು ಮಂದಿ ಹೊಸಬರು ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರವನ್ನು ಸಿಎಂ ಡಿ.ಕೆ.ಶಿವಕುಮಾರ್ ಗುಟ್ಟಾಗಿಟ್ಟಿದ್ದು, ಈ ಬಗ್ಗೆ ಇನ್ನೂ ಸ್ಪಷ್ಟನೆ ನೀಡಿಲ್ಲ.ಆದಾಗ್ಯೂ, ಹೈಕಮಾಂಡ್ ಜತೆಗಿನ ದೆಹಲಿ ಮಟ್ಟದ ಸರಣಿ ಮಾತುಕತೆಗಳ ಬಳಿಕ ನೂತನ ಸಚಿವರ ಪಟ್ಟಿಗೆ ಅಂತಿಮ ರೂಪುರೇಷೆ ಸಿಕ್ಕಿದೆ ಎನ್ನಲಾಗಿದೆ.


