Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೆ.15ರಂದು ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ

Advertisement
ಸಿರುಗುಪ್ಪ : ನಗರದ ಸರ್ಕಾರಿ ನೌಕರರ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ವತಿಯಿಂದ ದಿನಾಂಕ 15, ಶನಿವಾರದಂದು ನಡೆಯುವ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಪತ್ರಿಕಾ ಗೋಷ್ಠಿ ನಡೆಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷರಾದ ಡಾ.ಮದುಸೂಧನ ಕಾರಿಗನೂರು ಅವರು ಮಾತನಾಡಿ ದತ್ತಿ ಉಪನ್ಯಾಸಗಳು, ರಸಪ್ರಶ್ನೆ, ಭಾಷಣಸ್ಪರ್ಧೆ, ಪ್ರಬಂಧಸ್ಪರ್ಧೆ, ಆರೋಗ್ಯ ಮಾಹಿತಿಯಂತಹ ಹಲವಾರು ಕಾರ್ಯಕ್ರಮಗಳ ಮೂಲಕ ಕನ್ನಡ ಜಾಗೃತಿಯನ್ನು ಹಮ್ಮಿಕೊಂಡು ಬಂದಿದೆ.

ದಿನಾಂಕ 15, ಶನಿವಾರದಂದು ಶ್ರೀ ಅಭಯಾಂಜನೇಯ್ಯ ಸ್ವಾಮಿ ದೇವಸ್ಥಾನದ ಎದುರಿಗಿರುವ ಬಯಲು ಜಾಗದಲ್ಲಿ ತಾಲೂಕು ಮಟ್ಟದ 7ನೇ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ನಿವೃತ್ತ ಉಪನ್ಯಾಸಕರಾದ ಶಿವಕುಮಾರ.ಎಸ್.ಬಳಿಗಾರ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಬೆಳಿಗ್ಗೆ ಧ್ವಜಾರೋಹಣ, ಭುವನೇಶ್ವರಿ ಮಾತೆಯ ಮೆರವಣಿಗೆ, ಸಮ್ಮೇಳನದ ಉದ್ಘಾಟನೆ, ಮದ್ಯಾಹ್ನ ಸಾಹಿತ್ಯ ಗೋಷ್ಠಿಗಳು ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಸಾಹಿತಿಗಳ ಬರಹಗಳ ಸ್ಮರಣಸಂಚಿಕೆಯನ್ನು ಹೊರತರಲಾಗುತ್ತಿದೆ.

ದೂರದರ್ಶನ ಚಂದನದ “ಥಟ್ ಅಂತ ಹೇಳಿ” ರಸಪ್ರಶ್ನೆಯ ಮೂಲಕ ಕನ್ನಡದ ಕಂಪು ಹಾಗೂ ಜ್ಞಾನವನ್ನು ಪಸರಿಸುತ್ತಿರುವ ಡಾ.ನಾ.ಸೋಮೇಶ್ವರ್ ಅವರು ಉದ್ಘಾಟನಾದ ಮುಖ್ಯ ಅಥಿತಿಗಳಾಗಿದ್ದಾರೆ.

ಶಾಸಕರು, ಇನ್ನಿತರ ಜನಪ್ರತಿನಿಧಿಗಳು, ತಾಲೂಕಾಡಳಿತದ ಬೆಂಬಲದೊಂದಿಗೆ ನಡೆಯುತ್ತಿರುವ ಸಮ್ಮೇಳನದಲ್ಲಿ ಎಲ್ಲಾ ಕನ್ನಡಾಭಿಮಾನಿಗಳು ಸಮ್ಮೇಳನದಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಇದೇ ವೇಳೆ ಘಟಕದ ಗೌರವ ಕಾರ್ಯದರ್ಶಿ ಗಜೇಂದ್ರ, ನಗರ ಘಟಕದ ಅಧ್ಯಕ್ಷ ಕೆ.ಎಮ್.ಚಂದ್ರಕಾಂತ ನಿವೃತ್ತ ಶಿಕ್ಷಕರಾದ ನರಸಿಂಹಮೂರ್ತಿ, ಉಪನ್ಯಾಸಕರಾದ ಹರೀಶ್ ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ