Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯಲ್ಲಿ ಯುವಕರ ಮೇಲೆ ತಲ್ವಾರ್ ದಾಳಿ ಕೇಸ್ : ಒಂದೇ ತಾಸಿನಲ್ಲಿ ಆರೋಪಿಗಳು ಅರೆಸ್ಟ್ 

Advertisement

ಬೆಳಗಾವಿ : ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ನಡೆದ ತಲ್ವಾರ್ ದಾಳಿ ( Belagavi crime ) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳಮಾರುತಿ ಠಾಣೆ ಪೊಲೀಸರು (Malamaruti Police station) ಘಟನೆ ನಡೆದ ಒಂದೇ ಗಂಟೆಯೊಳಗೆ ಆರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳವಾರ ರಾತ್ರಿ ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಮೂವರು ಯುವಕರ ಮೇಲೆ ದುಷ್ಕರ್ಮಿಗಳು ತಲ್ವಾರ್‌ನಿಂದ ದಾಳಿ (Attempt to murder) ನಡೆಸಿದ್ದರು.

ದಾಳಿಯಲ್ಲಿ ಗಾಯಗೊಂಡ ಯುವಕರನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಘಟನೆಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಲು ಯತ್ನಿಸಿದರೂ, ಮಾಳಮಾರುತಿ ಠಾಣೆ ಪೊಲೀಸರು ಕಾರ್ಯಪ್ರವೃತ್ತರಾಗಿ, ಸೂಕ್ತ ಮಾಹಿತಿ ಸಂಗ್ರಹಿಸಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ನಡೆಸಿದರು.

ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದ್ದು, ದಾಳಿಗೆ ನಿಖರ ಕಾರಣ ಏನು ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ವೈಷಮ್ಯಕ್ಕೆ ಕಾರಣವಾದ ಅಂಶಗಳು, ದಾಳಿಯ ಪೂರ್ವ ಯೋಜನೆ ಇದ್ದಿತ್ತೇ ಎಂಬುದು ಸೇರಿದಂತೆ ಹಲವು ಕೋನಗಳಲ್ಲಿ ತನಿಖೆ ಮುಂದುವರಿದಿದೆ.

ಇನ್ನೂ ಯಾರಾದರೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಸಹ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಗತ್ಯವಿದ್ದಲ್ಲಿ ಮತ್ತಷ್ಟು ಬಂಧನ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಯುವಕರ ಮೇಲೆ ತಲ್ವಾರ್ ದಾಳಿ ಕೇಸ್ : ಒಂದೇ ತಾಸಿನಲ್ಲಿ ಆರೋಪಿಗಳು ಅರೆಸ್ಟ್ ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ ವಚನ ಸ್ವೀಕಾರ ಬೇವನೂರು ಗ್ರಾಮದ ಅಮೋಘಸಿದ್ದೇಶ್ವರ ಜಾತ್ರಾ ಮಹೋತ್ಸವ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯಿಂದ ಉಚಿತ ಆರೋಗ್ಯ ಶಿಬಿರ. ಚೇಳೂರು ಸರ್ಕಾರಿ ಆಸ್ಪತ್ರೆಗೆ ಬೇಕಿದೆ ಕಾಯಕಲ್ಪ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೋಗಿಗಳ ಪರದಾಟ.ಕಸ್ಕೋಟ ಸಸ್ಯರೋಗದಿಂದ ಬೆಳೆಹಾನಿ ಸಂಕಷ್ಟಕ್ಕೆ ಒಳಗಾದ ರೈತರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು:ಗೋಪಾಲ ಎಂ ಪಿಎರಡು ಬಲಿಷ್ಠ ಬ್ಯಾಟಿಂಗ್ ತಂಡಗಳ ಕಾದಾಟ ಇಂದುಚೆನ್ನೆöÊ ಸೂಪರ್ ಕಿಂಗ್ಸ್ ತಂಡಕ್ಕೆ ಮಹತ್ವದ ಗೆಲುವುಜಾತಿ ನಿಂದನೆ : ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಜಾತಿ ನಿಂದನೆ : ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ