Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸಲ್ಲ : ಹೈಕೋರ್ಟ್

Advertisement

ಬೆಂಗಳೂರು : ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಕರ್ನಾಟಕ ಹೈಕೋರ್ಟ್, ಎಲ್ಕೆಜಿ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಆರೋಪ ಎದುರಿಸುತ್ತಿರುವ ಸುರತ್ಕಲ್ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಆಶಾ ಕ್ರಾಸ್ತಾ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.

LKG ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸುರತ್ಕಲ್ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಆಶಾ ಕ್ರಾಸ್ತಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸುತ್ತಿದ್ದಾಗ ನ್ಯಾಯಪೀಠ, “ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವೇ ಇಲ್ಲ, ಇಂತಹ ಕೃತ್ಯವನ್ನು ನ್ಯಾಯಾಲಯ ಸಹಿಸುವುದಿಲ್ಲ” ಎಂದು ಖಡಕ್ವಾಗಿ ಹೇಳಿತು.

ಈ ಹಿನ್ನೆಲೆಯಲ್ಲಿ, ಮಂಗಳೂರಿನ 2ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿತು. 

ಜೊತೆಗೆ, ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಹಾಗೂ ದೂರುದಾರೆಯಾಗಿರುವ ಮಗುವಿನ ತಾಯಿ ಶ್ರಫೀನಾಗೆ ನೋಟಿಸ್ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಮುಂದೂಡಿತು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST