ಮುಂಬೈ: ನಗರದ (Mumbai) ಡೋಂಗ್ರಿ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40ರಿಂದ 50 ಗುಡಿಸಲುಗಳು ಹಾಗೂ ಸಣ್ಣ ವಾಣಿಜ್ಯ ಮಳಿಗೆಗಳು ಸಂಪೂರ್ಣವಾಗಿ (Fire Mishap) ಸುಟ್ಟು ಕರಕಲಾಗಿವೆ.
ಬೆಂಕಿಯ ತೀವ್ರತೆಗೆ ಹಲವು ಗ್ಯಾರೇಜ್‌ಗಳು, ಪೇಂಟ್ ಅಂಗಡಿಗಳು ಮತ್ತು ಬಟ್ಟೆ ಮಳಿಗೆಗಳು ಆಹುತಿಯಾಗಿವೆ.ಅಗ್ನಿ ಅವಘಡ ಸಂಭವಿಸಿದ ವೇಳೆ ಸ್ಥಳದಲ್ಲಿ ಭಾರಿ ಸ್ಫೋಟದ ಶಬ್ದಗಳು ಕೇಳಿಬಂದಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸತತ ಎರಡು ಗಂಟೆಗಳಿಗೂ ಹೆಚ್ಚು ಕಾಲ ಹರಸಾಹಸಪಟ್ಟು ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.


