LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
International News

ನೇಪಾಳದಲ್ಲಿ ಭೀಕರ ಪ್ರವಾಹ : 22 ಜನರ ದುರ್ಮರಣ, 133 ಮಂದಿ ಭಾರತೀಯರು ನಾಪತ್ತೆ

Advertisement

ನೇಪಾಳದ ಉತ್ತರ ಭಾಗದ ರಸುುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಪ್ರವಾಹದಲ್ಲಿ ಕನಿಷ್ಠ 22 ಮಂದಿ ಮೃತಪಟ್ಟಿದ್ದು, ಸುಮಾರು 400 ಮಂದಿ ನಾಪತ್ತೆಯಾಗಿದ್ದಾರೆ.

ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು ಎಂದು ವರದಿಯಾಗಿದೆ. ಭೋಟೆ ಕೋಶಿ ನದಿಯಲ್ಲಿ ಉಂಟಾದ ದಿಢೀರ್ ಪ್ರವಾಹದಿಂದ ಮನೆಗಳು, ವಾಹನಗಳು, ಸೇತುವೆಗಳು ಹಾಗೂ ಹಲವು ಮೂಲಸೌಕರ್ಯ ಯೋಜನೆಗಳು ಕೊಚ್ಚಿಹೋಗಿವೆ. 

ಪ್ರವಾಹದ ನೀರು ಕೆಳಭಾಗದತ್ತ ಹರಿಯುತ್ತಿರುವ ಹಿನ್ನೆಲೆಯಲ್ಲಿ ನೇಪಾಳದ ಗಡಿಗೆ ಹೊಂದಿಕೊಂಡಿರುವ ಬಿಹಾರದಲ್ಲೂ ಎಚ್ಚರಿಕೆ ವಹಿಸಲಾಗಿದೆ. ಉತ್ತರ ಪ್ರದೇಶದಲ್ಲೂ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಟಿಬೆಟ್ ಕಡೆಯಿಂದ ಭೋಟೆ ಕೋಶಿಗೆ ಪ್ರವಾಹ

ಅಧಿಕಾರಿಗಳ ಪ್ರಕಾರ, ಬುಧವಾರ ಬೆಳಗ್ಗೆ ಸುಮಾರು 9 ಗಂಟೆಗೆ ಟಿಬೆಟ್ ಭಾಗದಿಂದ ಭೋಟೆ ಕೋಶಿ ನದಿಗೆ ಭಾರಿ ಪ್ರಮಾಣದ ನೀರು ನುಗ್ಗಿದೆ. ಇದರಿಂದ ಟಿಮುರೆ ಮತ್ತು ಸ್ಯಾಫ್ರುಬೇಸಿ ಪ್ರದೇಶಗಳು ತೀವ್ರವಾಗಿ ಹಾನಿಗೊಳಗಾಗಿವೆ.

ಇದೇ ವೇಳೆ ಟಿಬೆಟ್‌ನ ಗ್ಯಿರಾಂಗ್ ಗಡಿ ಪ್ರದೇಶದ ಸಮೀಪವೂ ಭೂಕುಸಿತ ಸಂಭವಿಸಿದ್ದು, ಹಲವರು ಮೃತಪಟ್ಟಿರುವ ಸಾಧ್ಯತೆ ಇದೆ. ಕೆಲವರು ನಾಪತ್ತೆಯಾಗಿದ್ದಾರೆ ಎಂದು ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ಕ್ಸಿನ್ಹುವಾ ವರದಿ ಮಾಡಿದೆ.

ಚೀನಾ ಭಾಗದ ನೇಪಾಳ-ಟಿಬೆಟ್ ಗಡಿ ಪ್ರದೇಶದ ಭದ್ರತಾ ಕ್ಯಾಮೆರಾದ ದೃಶ್ಯಗಳಲ್ಲಿ ಭಾರಿ ಪ್ರಮಾಣದ ಕಲ್ಲು, ಕೆಸರು ಮತ್ತು ನೀರು ಅಪ್ಪಳಿಸುವ ಕೆಲವೇ ಕ್ಷಣಗಳ ಮೊದಲು ಜನರು ಓಡಿಹೋಗುತ್ತಿರುವುದು ಕಂಡುಬಂದಿದೆ. ಬಳಿಕ ಪ್ರವಾಹದ ರಭಸಕ್ಕೆ ಕಟ್ಟಡಗಳು ಮತ್ತು ವಾಹನಗಳು ಕೊಚ್ಚಿಹೋಗಿವೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಚನ್ನಬಸವೇಶ್ವರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿ.17 ನೇ ವರ್ಷದ ಸಾಮಾನ್ಯ ಸಭೆಅಕ್ರಮ ಚಟುವಟಿಕೆಗಳ ವಿರುದ್ಧ ಸತತವಾಗಿ ಹೋರಾಟ ಮಾಡಲಾಗುವುದು : ಗುರುರಾಜ ನಾಗಲಾಪುರಪ್ರವಾದಿ ಮೊಹಮ್ಮದ್ ಪೈಗಂಬರ್ ರವರ ಜನ್ಮದಿನ ಅಂಗವಾಗಿ ಮುಸ್ಲಿಂ ಸಮುದಾಯದವರಿಂದ ಮೆರವಣಿಗೆಜಾಕೋವೀಕ್ - ಸೇಬೆಲೆಮ್ಕಾ ಜೋಡಿಗೆ ಸೋಲುನೇಪಾಳದಲ್ಲಿ ಭೀಕರ ಪ್ರವಾಹ : 22 ಜನರ ದುರ್ಮರಣ, 133 ಮಂದಿ ಭಾರತೀಯರು ನಾಪತ್ತೆತುಮಕೂರು ಜಿಲ್ಲೆಯ ಹಾಲಿಗೆ ಅಂತರಾಜ್ಯದಲ್ಲೂ ಬೇಡಿಕೆ : ಸಿ.ವಿ.ಮಹಲಿಂಗಯ್ಯಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಸವಾರರು ಸ್ಥಳದಲ್ಲೇ ಸಾವು ಕರ್ನಾಟಕ ಮಾದರ ಮಹಾಸಭೆಗೆ  ಸರ್ಕಾರಿ ಭೂಮಿ ಮಂಜೂರುದೆಹಲಿಗೆ ಹೊರಟ ಸತೀಶ್ ಜಾರಕಿಹೊಳಿ : ಕುತೂಹಲ ಮೂಡಿಸಿದ ಸಚಿವರ ನಡೆ ಕೊಲಂಬೊ ಟೆಸ್ಟ್ : ಗೆಲುವಿನತ್ತ ಮುಖ ಮಾಡಿದ ಭಾರತ