LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಅಸ್ಸಾಂನ ಕಾಜಿರಂಗ ಬಳಿ ಭೀಕರ ರಸ್ತೆ ಅಪಘಾತ :26 ಮಂದಿ ಸಾವು, ಪ್ರಧಾನಿ ಸಂತಾಪ 

Advertisement

ನವದೆಹಲಿ: ಅಸ್ಸಾಂನ ಕಾಜಿರಂಗ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 26 ಮಂದಿ ಸಾವನ್ನಪ್ಪಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಅವರು ಘೋಷಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 715ರಲ್ಲಿ, ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್, ಟ್ರಕ್ ಒಂದಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಮೃತಪಟ್ಟವರಲ್ಲಿ ಕಾಲೇಜು ವಿದ್ಯಾರ್ಥಿಗಳೂ ಸೇರಿದ್ದಾರೆ.

ಜೋರ್ಹಟ್‌ನಿಂದ ಗುವಾಹಟಿಯತ್ತ ಪ್ರಯಾಣಿಸುತ್ತಿದ್ದ ಮಿನಿ ಬಸ್, ಗೋಲಾಘಾಟ್ ಜಿಲ್ಲೆಯ ಕೊಹೊರಾ ವ್ಯಾಪ್ತಿಯ ಹತಿಕುಲಿ ಚಹಾ ತೋಟದ ಸಮೀಪವಿರುವ ರಂಗಜನ್ ಎಂಬಲ್ಲಿ ಈ ಅಪಘಾತಕ್ಕೆ ಒಳಗಾಗಿದೆ. ಡಿಕ್ಕಿಯ ರಭಸಕ್ಕೆ ಮಿನಿ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ.

“ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜನರು ಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುಃಖಕರವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ.

 ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನ ಮಂತ್ರಿಗಳ ಕಚೇರಿ ‘ಎಕ್ಸ್’ (X) ಜಾಲತಾಣದಲ್ಲಿ ತಿಳಿಸಿದೆ.

“ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡಲಾಗುವುದು” ಎಂದು ತಿಳಿಸಲಾಗಿದೆ.

ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಆರಂಭದಲ್ಲಿ ಅಪಘಾತ ಸ್ಥಳದ ಸಮೀಪವಿರುವ ಕೊಹೊರಾ ಮಾದರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಅವರಲ್ಲಿ 13 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜೋರ್ಹಟ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (Jorhat Medical College and Hospital) ರವಾನಿಸಲಾಗಿದೆ.

ಅಪಘಾತ ನಡೆದ ಕೆಲವೇ ಹೊತ್ತಿನಲ್ಲಿ ಸ್ಥಳಕ್ಕೆ ಆಗಮಿಸಿದ ಸಚಿವ ಅತುಲ್ ಬೋರಾ, ಮಿನಿ ಬಸ್ ಜಖಂಗೊಂಡಿರುವ ರೀತಿಯನ್ನು ನೋಡಿದರೆ, ಅದು ಅತಿಯಾದ ವೇಗದಲ್ಲಿ ಚಲಿಸುತ್ತಿದ್ದಂತೆ ತೋರುತ್ತದೆ ಎಂದು ಹೇಳಿದರು. ಆದಾಗ್ಯೂ, ತನಿಖೆಯ ನಂತರವೇ ನಿಖರವಾದ ಸಂಗತಿಗಳು ಹೊರಬರಲಿವೆ ಎಂದು ಅವರು ತಿಳಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೈಯದ್ ಮುಸ್ತಾಕ್ ಅಲಿ ಟಿ-20 : ಕರ್ನಾಟಕ ಶುಭಾರಂಭ2,000ಕ್ಕೆ ಮರುಳಾಗಬೇಡಿ, 5,000 ರೂ. ಬರುವಂತೆ ಮಾಡಬಲ್ಲೆ: ಕುಮಾರಸ್ವಾಮಿ 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ತೆಲುಗು ನಟ ಗಿರಿಬಾಬು ನಿಧನಅಯ್ಯಪ್ಪ ಭಕ್ತರಿಗೆ ಸಿಹಿ ಸುದ್ದಿ :  2 ಲಕ್ಷ ಉಚಿತ ಜೀವ ವಿಮೆ, ಮನೆಯ ಬಾಗಿಲಿಗೇ ಪ್ರಸಾದ RSSಗೂ ನೋಂದಣಿ ಮಾಡಿಸಲಿದ್ದೇನೆ: ಪ್ರಿಯಾಂಕ್ ಖರ್ಗೆಭಾರತ ಕಿರಿಯರ ತಂಡಕ್ಕೆ 338 ರನ್ ಗಳ ಗೆಲುವಿನ ಗುರಿ 15 ಸಾವಿರ ರೂ. ಸಂಬಳ ಪಡೆಯುವ ಯುವಕನ ಹೆಸರಿನಲ್ಲಿ 350 ಕೋಟಿ ರೂ. ವಂಚನೆ538 ಕೋಟಿ ರೂ. ಕೊಟ್ಟು ಕೋಟೆ ಖರೀದಿಸಿದ ಫೇಸ್‌ಬುಕ್‌ ಮಾಲಿಕ ಜುಕರ್‌ಬರ್ಗ್‌ಉಡುಪಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ :  ತಾಯಿಯ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅಳುಕಲಾದಗಿಯ ಶ್ರೀ ಗುರುಲಿಂಗೇಶ್ವರ ಪ್ರೌಢ ಶಾಲೆ : ಜವಾಹರಲಾಲ್ ನೆಹರು ಜನ್ಮದಿನದ ಹಾಗೂ ಮಕ್ಕಳ ದಿನಾಚರಣೆ ಆಚರಣೆ