
ಕ್ರೂಸರ್ ವಾಹನದಲ್ಲಿ ದೇವರ ದರ್ಶನ ಪಡೆದು ವಾಪಸ್ ಬರುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ. ತಮಿಳುನಾಡಿನಿಂದ ಮುಂಬೈಗೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಜಾಂಬೋಟಿಯ ರೇಷ್ಮಾ ಹಾಗೂ ಶಂಕರ ಪಾರವಾಳಕರ ಗಂಭೀರವಾಗಿ ಗಾಯಗೊಂಡಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು ,15 ಜನರಿಗೆ ಸಣ್ಣ, ಪುಟ್ಟ ಗಾಯಗಳಾಗಿವೆ. ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:- ರಾಜು ಮುಂಡೆ

