Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇಲಾಧಿಕಾರಿ ಕಿರುಕುಳ : ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಸಹಾಯಕ ನಿರ್ದೇಶಕ 

Advertisement
ತುಮಕೂರು : ತುಮಕೂರು ಜಿಲ್ಲೆಯ ಪಾವಗಡದಲ್ಲಿ ಮೇಲಾಧಿಕಾರಿ ಜಂಟಿ ನಿರ್ದೇಶಕರ ಕಿರುಕುಳದಿಂದ ಬೇಸತ್ತು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮಲ್ಲಿಕಾರ್ಜುನ (59) ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾರಿ ವಿವಾದ ಎಬ್ಬಿಸಿದೆ.

ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಅವರು ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕಾರಣವೆಂದು ಹೇಳಿದ ವೀಡಿಯೋ ವೈರಲ್ ಆಗಿದೆ.

ಮೃತ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಾರಣ ಎಂದು ಆರೋಪಿಸಿದ್ದಾರೆ. ನನ್ನ ತಾಯಿ, ಪತ್ನಿ ಮತ್ತು ಮಕ್ಕಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ.

ಆದರೆ ಮೇಲಾಧಿಕಾರಿ ನೀಡಿದ ಕಿರುಕುಳದಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಅಲ್ಲದೆ, ಕೃಷ್ಣಪ್ಪ ಅವರಿಗೆ ದೇವರು ಹಾಗೂ ಕಾನೂನು ಶಿಕ್ಷೆ ನೀಡಲಿದೆ ಎಂದೂ ಹೇಳಿದ್ದಾರೆ. ಮಲ್ಲಿಕಾರ್ಜುನ ಮೂಲತಃ ಪಾವಗಡ ತಾಲೂಕಿನವರಾಗಿದ್ದು, ಕಳೆದ ಮೂರು ವರ್ಷಗಳಿಂದ ಅಲ್ಲಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸಾವಿಗೆ ಮುನ್ನ ಡೆತ್ ನೋಟ್ ಬರೆದಿರುವುದಾಗಿ ತಿಳಿದುಬಂದಿದ್ದು, ಅದರಲ್ಲಿ ಕೃಷ್ಣಪ್ಪ ಹಾಗೂ ಹಣಕಾಸು ಸಂಬಂಧಿತ ವಿಚಾರಗಳನ್ನೂ ಉಲ್ಲೇಖಿಸಿರುವ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟ್ ವಶಪಡಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ